Dailyhunt Logo
  • Light mode
    Follow system
    Dark mode
    • Play Story
    • App Story
ನೇರಳೆ ಹಣ್ಣು ತಿನ್ನುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಲಾಭ.. ಇಲ್ಲಿದೆ ಮಾಹಿತಿ

ನೇರಳೆ ಹಣ್ಣು ತಿನ್ನುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಲಾಭ.. ಇಲ್ಲಿದೆ ಮಾಹಿತಿ

ನೇರಳೆ ಹಣ್ಣು ಸಕ್ಕರೆ ಕಾಯಿಲೆ ಇರುವವರಿಗೆ ಅಮೃತವಿದ್ದಂತೆ. ಇದರಲ್ಲಿರುವ 'ಜಾಂಬೋಲಿನ್' ಎಂಬ ಅಂಶವು ಆಹಾರದಲ್ಲಿನ ಪಿಷ್ಟವನ್ನು ಗ್ಲುಕೋಸ್ ಆಗಿ ಬದಲಾಗದಂತೆ ತಡೆಯುತ್ತದೆ. ಇದರ ಬೀಜದ ಪುಡಿ ಕೂಡ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಕಾರಿ.

ಇದರಲ್ಲಿ ವಿಟಮಿನ್ ಸಿ ಮತ್ತು ಆಯಂಟಿಆಕ್ಸಿಡೆಂಟ್‌ ಸಮೃದ್ಧವಾಗಿವೆ.

ಇದು ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಿ, ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ನೇರಳೆ ಹಣ್ಣಿನಲ್ಲಿ ನಾರಿನಾಂಶ ಹೆಚ್ಚಿರುವುದರಿಂದ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆ. ಹೊಟ್ಟೆ ಉರಿ, ಗ್ಯಾಸ್ಟ್ರಿಕ್ ಮತ್ತು ಅಜೀರ್ಣದಂತಹ ಜೀರ್ಣಾಂಗ ವ್ಯವಸ್ಥೆಯ ಸಮಸ್ಯೆಗಳಿಗೆ ಇದು ಅತ್ಯುತ್ತಮ ಮದ್ದು.

ಇದರಲ್ಲಿ ಪೊಟ್ಯಾಸಿಯಮ್ ಅಂಶ ಹೇರಳವಾಗಿದೆ. ಇದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಮತ್ತು ಪಾರ್ಶ್ವವಾಯು ಹಾಗೂ ಹೃದಯಾಘಾತದಂತಹ ಅಪಾಯಗಳನ್ನು ಕಡಿಮೆ ಮಾಡಲು ನೆರವಾಗುತ್ತದೆ.

ಈ ಹಣ್ಣಿನಲ್ಲಿ ಕಬ್ಬಿಣದ ಅಂಶ ಹೆಚ್ಚಿರುವುದರಿಂದ, ಇದು ರಕ್ತದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ರಕ್ತವನ್ನು ಶುದ್ಧೀಕರಿಸುತ್ತದೆ.

ವಿಟಮಿನ್ ಸಿ ಮತ್ತು ಆಯಂಟಿಆಕ್ಸಿಡೆಂಟ್‌ಗಳು ಚರ್ಮದ ಮೇಲಿನ ಕಲೆಗಳು, ಸುಕ್ಕುಗಳು ಮತ್ತು ಮೊಡವೆಗಳನ್ನು ಕಡಿಮೆ ಮಾಡಿ, ಚರ್ಮವು ಕಾಂತಿಯುತವಾಗಿ ಕಾಣುವಂತೆ ಮಾಡುತ್ತದೆ.

ನೇರಳೆ ಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಬಾರದು. ಇದನ್ನು ತಿಂದ ತಕ್ಷಣ ಹಾಲು ಕುಡಿಯುವುದನ್ನು ತಪ್ಪಿಸುವುದು ಒಳ್ಳೆಯದು ಎನ್ನುತ್ತಾರೆ ವೈದ್ಯರು

Dailyhunt
Disclaimer: This content has not been generated, created or edited by Dailyhunt. Publisher: Prajavani