Dailyhunt Logo
  • Light mode
    Follow system
    Dark mode
    • Play Story
    • App Story
ನೀರಿನ ಸಮಸ್ಯೆ: ಮನವಿ ಸಲ್ಲಿಕೆ

ನೀರಿನ ಸಮಸ್ಯೆ: ಮನವಿ ಸಲ್ಲಿಕೆ

ಚನ್ನಗಿರಿ: ತಾಲ್ಲೂಕಿನ ನಲ್ಲೂರು ಗ್ರಾಮದಲ್ಲಿ ಒಂದು ತಿಂಗಳಿಂದ ಗ್ರಾಮ ಪಂಚಾಯಿತಿಯವರು ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡುತ್ತಿಲ್ಲ ಎಂದು ದೂರಿ ಗ್ರಾಮದ ಮುಖಂಡ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಉಸ್ಮಾನ್ ಶರೀಫ್ ತಹಶೀಲ್ದಾರ್ ಎನ್.ಜೆ. ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.

'ನಲ್ಲೂರು ಗ್ರಾಮ ತಾಲ್ಲೂಕಿನಲ್ಲಿಯೇ ಮೂರನೇ ಅತಿ ದೊಡ್ಡ ಗ್ರಾಮವಾಗಿದ್ದು, 16 ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿದೆ. 26 ವಾರ್ಡ್‌ಗಳಿದ್ದು, ನಿವಾಸಿಗಳು ಕುಡಿಯುವ ನೀರಿಗೆ ತೀವ್ರ ತೊಂದರೆ ಅನುಭವಿಸುವಂತಾಗಿದೆ. ಸಮಸ್ಯೆ ನಿವಾರಿಸಲು ಪಿಡಿಒ ವಿಫಲರಾಗಿದ್ದಾರೆ. ತಹಶೀಲ್ದಾರ್ ಅವರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಲಾಗಿದೆ' ಎಂದು ಉಸ್ಮಾನ್ ಶರೀಫ್ ತಿಳಿಸಿದರು.

ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ತಾಲ್ಲೂಕು ಪಂಚಾಯಿತಿ ಇಒ ಅವರಿಗೆ ಸೂಚನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಎನ್.ಜೆ. ನಾಗರಾಜ್ ಭರವಸೆ ನೀಡಿದರು.

261104-43-180376804

Dailyhunt
Disclaimer: This content has not been generated, created or edited by Dailyhunt. Publisher: Prajavani