Dailyhunt Logo
  • Light mode
    Follow system
    Dark mode
    • Play Story
    • App Story
ನೀಟ್ ಮರುಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ವಿಡಿಯೊ ನಕಲಿ: ಎನ್‌ಟಿಎ

ನೀಟ್ ಮರುಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ವಿಡಿಯೊ ನಕಲಿ: ಎನ್‌ಟಿಎ

ವದೆಹಲಿ: ನೀಟ್‌-ಯುಜಿ 2026ರ ಮರುಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ನಕಲಿ ವಿಡಿಯೊ ಹರಿದಾಡುತ್ತಿದೆ. ಇದು ಸುಳ್ಳು ಮಾಹಿತಿಯಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್‌ಟಿಎ) ತಿಳಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಎನ್‌ಟಿಎ, 'ನೀಟ್‌ ಮರುಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ.

ಆದರೂ, ಪರೀಕ್ಷೆಯ ಕುರಿತು ಜಾಲತಾಣದಲ್ಲಿ ತಿರುಚಿದ ವಿಡಿಯೊ ಹರಿದಾಡುತ್ತಿದೆ. ಈ ರೀತಿಯ ಸುಳ್ಳು ಸುದ್ದಿಗಳನ್ನು ಹರಿಬಿಡುವುದು ಗಂಭೀರ ಅಪರಾಧವಾಗಿದೆ. ಆರೋಪಿಗಳ ವಿರುದ್ಧ ನಾವು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಹೇಳಿದೆ.

ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರು ನೀಟ್‌ ಪರೀಕ್ಷೆಯ ಕುರಿತ ಮಾಹಿತಿಗಾಗಿ ಎನ್‌ಟಿಎ ವೆಬ್‌ಸೈಟ್‌ ಮತ್ತು ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಬರುವ ಮಾಹಿತಿಯನ್ನು ಮಾತ್ರ ಅವಲಂಬಿಸಿ ಎಂದು ಮನವಿ ಮಾಡಿದೆ.

ನೀಟ್‌ ಮರುಪರೀಕ್ಷೆಗಾಗಿ ಪರೀಕ್ಷಾ ಸಿಬ್ಬಂದಿ, ಮೇಲ್ವಿಚಾರಕರು ಹಾಗೂ ಪೊಲೀಸರು ಸೇರಿದಂತೆ 7 ಲಕ್ಷಕ್ಕೂ ಅಧಿಕ ಅಧಿಕಾರಿಗಳು ಕಾರ್ಯನಿರ್ವಹಿಸಿದ್ದಾರೆ. 37 ದಿನಗಳಲ್ಲೇ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಹೇಳಿದೆ.

ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಬಯಸಿರುವ 20 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಭಾನುವಾರ(ಜೂನ್‌ 21) ನಡೆದ 'ನೀಟ್‌-ಯುಜಿ' ಮರುಪರೀಕ್ಷೆಗೆ ಹಾಜರಾಗಿದ್ದರು. ದೇಶದಾದ್ಯಂತ 5,440 ಕೇಂದ್ರಗಳು ಮತ್ತು ವಿದೇಶಗಳ 14 ಕೇಂದ್ರಗಳಲ್ಲಿ ಮರುಪರೀಕ್ಷೆ ನಡೆದಿದೆ.

ಬಿಗಿ ಭದ್ರತೆಯಲ್ಲಿ ಮರಳಿ ನೀಟ್‌
Dailyhunt
Disclaimer: This content has not been generated, created or edited by Dailyhunt. Publisher: Prajavani