Dailyhunt Logo
  • Light mode
    Follow system
    Dark mode
    • Play Story
    • App Story
ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ರಾಹುಲ್ ಗಾಂಧಿ ಬಂಧನ ವಿರುದ್ಧ ಪ್ರತಿಭಟನೆ

ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ರಾಹುಲ್ ಗಾಂಧಿ ಬಂಧನ ವಿರುದ್ಧ ಪ್ರತಿಭಟನೆ

ತಿಪಟೂರು: ನೀಟ್ ಪರೀಕ್ಷೆ ಅಕ್ರಮದ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸುವಂತೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಇತರ ನಾಯಕರ ಬಂಧನ ಖಂಡಿಸಿ ನಗರದ ಸಿಂಗ್ರೀ ನಂಜಪ್ಪ ವೃತ್ತದಲ್ಲಿ ಮಂಗಳವಾರ ಕಾಂಗ್ರೆಸ್ ಪ್ರಮುಖರು ಪ್ರತಿಭಟನೆ ನಡೆಸಿದರು.

ನೀಟ್ ಅಕ್ರಮದ ಬಗ್ಗೆ ಸಂಸತ್‌ನಲ್ಲಿ ಚರ್ಚಿಸಬೇಕು. ಕೇಂದ್ರ ಸರ್ಕಾರ ದೇಶದ ಜನತೆಗೆ ಉತ್ತರ ನೀಡುವಂತೆ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜನಸ್ಪಂದನ ಟ್ರಸ್ಟ್ ಅಧ್ಯಕ್ಷ ಸಿ.ಬಿ.ಶಶಿಧರ್ (ಟೂಡಾ) ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನೀಟ್ ಪರೀಕ್ಷೆ ಅಕ್ರಮಗಳ ಕುರಿತು ದೇಶದ ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಗಂಭೀರ ವಿಷಯದಲ್ಲಿ ಸರ್ಕಾರ ಪಾರದರ್ಶಕವಾಗಿ ನಡೆದುಕೊಂಡು ಸಂಸತ್ತಿನಲ್ಲಿ ಸಮಗ್ರ ಚರ್ಚೆ ನಡೆಸಬೇಕು. ಜನರ ಪ್ರಶ್ನೆಗಳಿಗೆ ಉತ್ತರ ನೀಡುವ ಬದಲು ಪ್ರತಿಭಟನಕಾರರನ್ನು ಬಂಧಿಸಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಟೀಕಿಸಿದರು.

ಪ್ರಮುಖರಾದ ಅಲ್ಲಾಬಕಾಷ್, ಅರಳಗುಪ್ಪೆ ಎಟಿಪಿ ಪ್ರಸಾದ್, ಕಿರಣ್, ಮೋಹನ್, ಶ್ರೀಕಾಂತ್‌ ಕೆಳಹಟ್ಟಿ, ಶರತ್‌ ಕಲ್ಲೇಗೌಡನಪಾಳ್ಯ, ಬಸವರಾಜು ಮುಂತಾದವರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260722-17-630786413

Dailyhunt
Disclaimer: This content has not been generated, created or edited by Dailyhunt. Publisher: Prajavani