Dailyhunt Logo
  • Light mode
    Follow system
    Dark mode
    • Play Story
    • App Story
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ | ಕಲ್ಲು, ಮೊಟ್ಟೆ ತೂರಾಟ: ಹಲವರಿಗೆ ಗಾಯ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ | ಕಲ್ಲು, ಮೊಟ್ಟೆ ತೂರಾಟ: ಹಲವರಿಗೆ ಗಾಯ

ರಾಂಚಿ: ಜಾರ್ಖಂಡ್‌ನ ರಾಂಚಿಯಲ್ಲಿ ಗುರುವಾರ ನಡೆದ ಪ್ರತಿಭಟನೆ ವೇಳೆ, ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರು ಪರಸ್ಪರ ಕಲ್ಲು ಹಾಗೂ ಮೊಟ್ಟೆ ತೂರಾಟ ನಡೆಸಿದ್ದರಿಂದ ಹಲವರು ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಪೊಲೀಸ್‌ ಸಿಬ್ಬಂದಿ ಮತ್ತು ಪತ್ರಕರ್ತರೂ ಗಾಯಗೊಂಡಿದ್ದಾರೆ.

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಪ್ರಧಾನ ಕಚೇರಿ ಕಡೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರ ರಾಜೀನಾಮೆಗೆ ಒತ್ತಾಯಿಸಿದರು.

ಇದಕ್ಕೆ ಪ್ರತಿಯಾಗಿ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟಿಸಿದರು. ಈ ವೇಳೆ, ಎರಡೂ ಕಡೆಯವರು ಕಲ್ಲು, ಮೊಟ್ಟೆ ಹಾಗೂ ಟೊಮೆಟೊ ಎಸೆದಿದ್ದಾರೆ. ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

'ಮೊಟ್ಟೆ, ಕಲ್ಲು ತೂರಾಟ ನಡೆಸಿದವರ ಪೈಕಿ ಕೆಲವರನ್ನು ಬಂಧಿಸಿದ್ದೇವೆ. ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಿ, ಮತ್ತಷ್ಟು ಜನರನ್ನು ಬಂಧಿಸುತ್ತೇವೆ' ಎಂದು ರಾಂಚಿ ಎಸ್‌ಪಿ (ಗ್ರಾಮೀಣ) ಗೌರವ್‌ ಗೋಸ್ವಾಮಿ ತಿಳಿಸಿದ್ದಾರೆ.

 ರಾಂಚಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದರು -ಪಿಟಿಐ ಚಿತ್ರ
Dailyhunt
Disclaimer: This content has not been generated, created or edited by Dailyhunt. Publisher: Prajavani