ಶಹಾಪುರ (ಜನವಾಡ): 'ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಸಸಿ ನೆಡಬೇಕು' ಎಂದು ಸಹಕಾರ ಸಂಘಗಳ ಸಹಾಯಕ ನಿಬಂಧಕಿ ನೀಲಾಂಬಿಕಾ ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿಯಮಿತ, ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಹಕಾರ ಸಪ್ತಾಹದ ಅಂಗವಾಗಿ ಬೀದರ್ ತಾಲ್ಲೂಕಿನ ಶಹಾಪುರದಲ್ಲಿ ನಡೆದ ಸಸಿ ನೆಡುವಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
'ಗಿಡ-ಮರಗಳು ಯಾವುದೇ ಫಲಾಪೇಕ್ಷೆ ಇಲ್ಲದೆ ಮಾನವನಿಗೆ ಆಮ್ಲಜನಕ ನೀಡುತ್ತವೆ. ಪಕ್ಷಿ ಹಾಗೂ ಅನೇಕ ಜಾನುವಾರುಗಳ ಆಶ್ರಯ ತಾಣವಾಗಿವೆ. ಅನೇಕ ಸಸಿಗಳು ಔಷಧೀಯ ಗುಣ ಹೊಂದಿವೆ' ಎಂದು ತಿಳಿಸಿದರು. ಜಿಲ್ಲಾ ಸಹಕಾರ ಯುನಿಯನ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಆರ್.ಮಲ್ಲಮ್ಮ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವೀರೇಂದ್ರ ಪಾಟೀಲ ಹಾಜರಿದ್ದರು. ಮಾರುತಿ ಕೆ. ನಿರೂಪಿಸಿದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260705-33-1695816787

