ಸಂಕ್ಷಿಪ್ತ ಮಾಹಿತಿ - ಪೂರ್ಣ ವಿವರಣೆಗೆ ಕ್ಲಿಕ್ ಮಾಡಿಪ್ರಮುಖ ಮುಖ್ಯಾಂಶಗಳ ಸಂಕ್ಷಿಪ್ತ ಸಾರಾಂಶ
ಪಶ್ಚಿಮ ಬಂಗಾಳ: ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಆಪ್ತ ಸಹಾಯಕನ ಗುಂಡಿಕ್ಕಿ ಕೊಲೆ
ಒಂದು ಸಾಲಿನಲ್ಲಿಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಪ್ರಮುಖ ಸಂಗತಿಗಳು• ಘಟನೆಯ ಹಿನ್ನೆಲೆ ಮತ್ತು ಸ್ಥಳಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರು ಕೋಲ್ಕತ್ತದಿಂದ ಹಿಂತಿರುಗುತ್ತಿದ್ದಾಗ ಮಧ್ಯಮ್‌ಗ್ರಾಮ್‌ನ ಜೆಸ್ಸೋರ್ ರಸ್ತೆಯ ದೊಹರಿಯಾ ಬಳಿ ಈ ದಾಳಿ ನಡೆದಿದೆ.• ದಾಳಿಯ ಭೀಕರ ಸ್ವರೂಪಮೋಟಾರ್‌ಸೈಕಲ್‌ನಲ್ಲಿ ಬಂದ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ, ಮುಂಭಾಗದ ವಿಂಡ್‌ಶೀಲ್ಡ್ ಮೇಲೆ ಮತ್ತು ಕಾರಿನಲ್ಲಿದ್ದ ರಥ್ ಅವರ ಎದೆಗೆ ಗುಂಡಿನ ದಾಳಿ ನಡೆಸಿದ್ದಾರೆ.• ಪ್ರಾಣಾಪಾಯ ಮತ್ತು ಸಾವುಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ರಥ್ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.• ಪೊಲೀಸ್ ಭದ್ರತೆ ಮತ್ತು ತನಿಖೆಘಟನೆಯ ನಂತರ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಪೊಲೀಸರು ಹೆಚ್ಚುವರಿ ತುಕಡಿಗಳನ್ನು ನಿಯೋಜಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ.ಎಐ ಬಳಸಿ ಸಂಸ್ಕರಿಸಲಾಗಿದೆ. ಪಿವಿ ಡಿಜಿಟಲ್ ತಂಡ ಪರಿಶೀಲಿಸಿದೆ
ಕೋಲ್ಕತ್ತ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಉತ್ತರ 24 ಪರಗಣ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಇದರಿಂದ ಈ ಭಾಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ರಥ್ ಅವರು ಕೋಲ್ಕತ್ತದಿಂದ ತಮ್ಮ ಫ್ಲಾಟ್‌ಗೆ ಕಾರಿನಲ್ಲಿ ಹಿಂತಿರುಗುತ್ತಿದ್ದಾಗ ಮಧ್ಯಮ್‌ಗ್ರಾಮ್ ಪ್ರದೇಶದ ಜೆಸ್ಸೋರ್ ರಸ್ತೆಯ ದೊಹರಿಯಾ ಬಳಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಹತ್ತಿರದಿಂದ ಗುಂಡಿನ ದಾಳಿ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಮೋಟಾರ್ ಸೈಕಲ್‌ಗಳಲ್ಲಿ ಬಂದಿದ್ದ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ, ಹತ್ತಿರದಿಂದ ಗುಂಡುಗಳನ್ನು ಹಾರಿಸಿದ್ದಾರೆ. ಮೊದಲು ಮುಂಭಾಗದ ವಿಂಡ್‌ಶೀಲ್ಡ್‌ಗೆ ಗುಂಡು ಹಾರಿಸಿ, ಬಳಿಕ ಮುಂದಿನ ಸೀಟಿನಲ್ಲಿ ಕುಳಿತಿದ್ದ ರಥ್ ಮೇಲೆ ಪದೇ ಪದೇ ಗುಂಡು ಹಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ದಾಳಿಯಲ್ಲಿ ಗಂಭೀರ ಗಾಯಗೊಂಡ ಚಂದ್ರನಾಥ್ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ವೈದ್ಯರು ಅವರನ್ನು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು ಎಂದು ಮೂಲಗಳು ತಿಳಿಸಿವೆ.
ಹಲವು ಗುಂಡುಗಳು ರಥ್ ಅವರ ಎದೆಗೆ ತಗುಲಿ, ಅತಿಯಾದ ರಕ್ತಸ್ರಾವವಾಗಿ ಅವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮತ್ತೊಬ್ಬ ವ್ಯಕ್ತಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಸುವೇಂದು ಅಧಿಕಾರಿ ಸೇರಿದಂತೆ ಬಿಜೆಪಿಯ ಹಲವು ಹಿರಿಯ ನಾಯಕರು ಸ್ಥಳಕ್ಕೆ ಭೇಟಿ ನೀಡಿ, ಆಸ್ಪತ್ರೆಗೆ ತೆರಳಿದರು.
ಈ ಘಟನೆಯ ಸುದ್ದಿ ತ್ವರಿತವಾಗಿ ಹರಡಿದ್ದು, ಪೊಲೀಸರು ಹೆಚ್ಚುವರಿ ಪೊಲಿಸ್ ತುಕಡಿಯನ್ನು ನಿಯೋಜಿಸುವ ಮೂಲಕ ಬಿಗಿ ಭದ್ರತೆ ಕಲ್ಪಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ತನಿಖೆ ಆರಂಭಿಸಿದ್ದಾರೆ.
'ನಾವು ಶಾಂತಿಯನ್ನು ಬೋಧಿಸುತ್ತಿದ್ದರೆ, ಟಿಎಂಸಿಯವರು ಅತಿದೊಡ್ಡ ಪ್ರಮಾದ ಮಾಡಿದ್ದಾರೆ' ಎಂದು ಹೊಸದಾಗಿ ಆಯ್ಕೆಯಾದ ಬಿಜೆಪಿ ಶಾಸಕಿ ತರುಣ್‌ಜ್ಯೋತಿ ತಿವಾರಿ ಕಿಡಿಕಾರಿದ್ದಾರೆ.

ಚಂದ್ರನಾಥ್ ರಥ್ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದರು

