Dailyhunt Logo
  • Light mode
    Follow system
    Dark mode
    • Play Story
    • App Story
ಪಶ್ಚಿಮ ಏಷ್ಯಾ ಸಂಘರ್ಷ | ಭಾರತದಲ್ಲಿ ಕಚ್ಚಾ ವಸ್ತುಗಳ ಪೂರೈಕೆಯಲ್ಲಿ ಕೊರತೆ: ಸಿಐಐ

ಪಶ್ಚಿಮ ಏಷ್ಯಾ ಸಂಘರ್ಷ | ಭಾರತದಲ್ಲಿ ಕಚ್ಚಾ ವಸ್ತುಗಳ ಪೂರೈಕೆಯಲ್ಲಿ ಕೊರತೆ: ಸಿಐಐ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದಿಂದಾಗಿ ಹಡಗುಗಳ ಸಂಚಾರ ವಿಳಂಬವಾಗುತ್ತಿದೆ. ಜೊತೆಗೆ ದೇಶದ ಕಂಪನಿಗಳಿಗೆ ಪ್ರಮುಖ ಕಚ್ಚಾ ವಸ್ತುಗಳ ಕೊರತೆ ಉಂಟಾಗಿದೆ ಎಂದು ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಭಾನುವಾರ ಹೇಳಿದೆ.

ಸಂಘರ್ಷದಿಂದ ಪ್ರಮುಖ ಸಮುದ್ರ ಮಾರ್ಗಗಳಲ್ಲಿ ಹಡಗುಗಳ ಸಂಚಾರಕ್ಕೆ ಮತ್ತು ಜಾಗತಿಕ ಪೂರೈಕೆ ವ್ಯವಸ್ಥೆಗೆ ಅಡ್ಡಿ ಉಂಟುಮಾಡಿದೆ.

ಕಂಪನಿಗಳು ಇದರ ಪರಿಣಾಮವನ್ನು ಈಗಾಗಲೇ ಅನುಭವಿಸುತ್ತಿವೆ ಎಂದು ಸಿಐಐನ ಮಹಾನಿರ್ದೇಶಕ ಚಂದ್ರಜಿತ್‌ ಬ್ಯಾನರ್ಜಿ ಹೇಳಿದ್ದಾರೆ.

ಇಂಧನ ಮಾರುಕಟ್ಟೆ ಮತ್ತು ವ್ಯಾಪಾರದ ಮೇಲೂ ಸಂಘರ್ಷವು ಒತ್ತಡ ಸೃಷ್ಟಿಸಿದೆ. ಇದರಿಂದ ಆಮದು ಮತ್ತು ರಫ್ತು ವಲಯವು ಪರಿಣಾಮ ಅನುಭವಿಸುತ್ತಿದ್ದು, ತಯಾರಿಕಾ ವಲಯದ ಕೈಗಾರಿಕೆಗಳಲ್ಲಿ ಇದರ ಪರಿಣಾಮ ಕಂಡು ಬರುತ್ತಿದೆ ಎಂದು ಸಿಐಐ ತಿಳಿಸಿದೆ.

Dailyhunt
Disclaimer: This content has not been generated, created or edited by Dailyhunt. Publisher: Prajavani