Dailyhunt Logo
  • Light mode
    Follow system
    Dark mode
    • Play Story
    • App Story
ಪೆಟ್ರೋಲ್, ಡೀಸೆಲ್ ಬೆಲೆ ತಲಾ ₹3 ಹೆಚ್ಚಳ: ಪರಿಷ್ಕೃತ ದರ ಇಂದಿನಿಂದಲೇ ಜಾರಿ

ಪೆಟ್ರೋಲ್, ಡೀಸೆಲ್ ಬೆಲೆ ತಲಾ ₹3 ಹೆಚ್ಚಳ: ಪರಿಷ್ಕೃತ ದರ ಇಂದಿನಿಂದಲೇ ಜಾರಿ

ವದೆಹಲಿ: ದೇಶದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ₹3 ಹೆಚ್ಚಿಸಲಾಗಿದೆ. ಪರಿಷ್ಕೃತ ದರ ಇಂದಿನಿಂದಲೇ (ಶುಕ್ರವಾರ) ಜಾರಿಗೆ ಬರಲಿದೆ.

ತೈಲ ಮಾರಾಟ ಕಂಪನಿಗಳು ಜಾಗತಿಕ ಮಾರುಕಟ್ಟೆಯ ಇಂಧನ ದರ ಏರಿಕೆಗೆ ಅನುಗುಣವಾಗಿ ದರವನ್ನು ಏರಿಕೆ ಮಾಡಿವೆ.

ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ₹94.77 ನಿಂದ ₹97.77ಕ್ಕೆ ಏರಿಕೆಯಾಗಿದೆ. ಡೀಸೆಲ್ ಬೆಲೆ ₹87.67 ನಿಂದ ₹90.67ಕ್ಕೆ ಏರಿಕೆಯಾಗಿದೆ.

ಸಂಕ್ಷಿಪ್ತ ಮಾಹಿತಿ - ಪೂರ್ಣ ವಿವರಣೆಗೆ ಕ್ಲಿಕ್ ಮಾಡಿಪ್ರಮುಖ ಮುಖ್ಯಾಂಶಗಳ ಸಂಕ್ಷಿಪ್ತ ಸಾರಾಂಶ


ಪೆಟ್ರೋಲ್, ಡೀಸೆಲ್ ಬೆಲೆ ತಲಾ ₹3 ಹೆಚ್ಚಳ: ಪರಿಷ್ಕೃತ ದರ ಇಂದಿನಿಂದಲೇ ಜಾರಿ

ಒಂದು ಸಾಲಿನಲ್ಲಿದೇಶದಾದ್ಯಂತ ತೈಲ ಮಾರಾಟ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ ₹3 ಹೆಚ್ಚಿಸಿದ್ದು, ಪರಿಷ್ಕೃತ ದರವು ಇಂದಿನಿಂದಲೇ ಜಾರಿಗೆ ಬಂದಿದೆ.ಪ್ರಮುಖ ಸಂಗತಿಗಳು• ಇಂಧನ ದರದಲ್ಲಿ ₹3 ಏರಿಕೆಜಾಗತಿಕ ಮಾರುಕಟ್ಟೆಯಲ್ಲಿ ಇಂಧನ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ತೈಲ ಮಾರಾಟ ಕಂಪನಿಗಳು ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತಲಾ ₹3 ಹೆಚ್ಚಿಸಿವೆ.• ತಕ್ಷಣದಿಂದಲೇ ಜಾರಿಯಾದ ದರಪರಿಷ್ಕೃತ ಇಂಧನ ದರಗಳು ಶುಕ್ರವಾರದಿಂದಲೇ ಜಾರಿಗೆ ಬಂದಿದ್ದು, ಗ್ರಾಹಕರಿಗೆ ಹೊಸ ಬೆಲೆ ಅನ್ವಯವಾಗಲಿದೆ.• ರಾಷ್ಟ್ರ ರಾಜಧಾನಿಯಲ್ಲಿ ಹೊಸ ದರದೆಹಲಿಯಲ್ಲಿ ಪೆಟ್ರೋಲ್ ಬೆಲೆಯು ₹94.77 ರಿಂದ ₹97.77 ಕ್ಕೆ ಮತ್ತು ಡೀಸೆಲ್ ಬೆಲೆಯು ₹89.67 ರಿಂದ ₹90.67 ಕ್ಕೆ ಏರಿಕೆಯಾಗಿದೆ.• ನಾಲ್ಕು ವರ್ಷಗಳ ನಂತರದ ಬದಲಾವಣೆಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಕಳೆದ ನಾಲ್ಕು ವರ್ಷಗಳಿಂದ ದರ ಏರಿಕೆ ಮಾಡಿರಲಿಲ್ಲ ಎಂಬುದು ಗಮನಾರ್ಹ.• ಚುನಾವಣಾ ಪೂರ್ವದ ಬೆಲೆ ಕಡಿತಕಳೆದ ಮಾರ್ಚ್ 2024 ರಲ್ಲಿ, ಲೋಕಸಭಾ ಚುನಾವಣೆಗೂ ಮುನ್ನ ಸರ್ಕಾರ ಇಂಧನ ದರವನ್ನು ₹2 ರಷ್ಟು ಕಡಿತಗೊಳಿಸಿತ್ತು.ಪ್ರಮುಖ ಅಂಕಿಅಂಶಗಳು₹3ಪ್ರತಿ ಲೀಟರ್‌ಗೆ ದರ ಹೆಚ್ಚಳ₹97.77ದೆಹಲಿಯಲ್ಲಿ ಪೆಟ್ರೋಲ್ ಹೊಸ ದರ₹90.67ದೆಹಲಿಯಲ್ಲಿ ಡೀಸೆಲ್ ಹೊಸ ದರಮಾರ್ಚ್ 2024ದರ ಕಡಿತದ ಅವಧಿಎಐ ಬಳಸಿ ಸಂಸ್ಕರಿಸಲಾಗಿದೆ. ಪಿವಿ ಡಿಜಿಟಲ್ ತಂಡ ಪರಿಶೀಲಿಸಿದೆ

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಕಳೆದ 4 ವರ್ಷಗಳಿಂದ (2022ರ ಏಪ್ರಿಲ್) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿರಲಿಲ್ಲ. ಆದರೆ ಲೋಕಸಭಾ ಚುನಾವಣೆಗೆ ಸ್ವಲ್ಪ ಮೊದಲು ಅಂದರೆ 2024ರ ಮಾರ್ಚ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ₹2 ಕಡಿತಗೊಳಿಸಲಾಗಿತ್ತು.

ಶುಕ್ರವಾರದಿಂದ ಜಾರಿಗೆ ಬರುವಂತೆ, ನಾಲ್ಕು ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೀಗಿದೆ..

Dailyhunt
Disclaimer: This content has not been generated, created or edited by Dailyhunt. Publisher: Prajavani