Dailyhunt Logo
  • Light mode
    Follow system
    Dark mode
    • Play Story
    • App Story
ಪೆಟ್ರೋಲ್, ಡೀಸೆಲ್ ದರ ಏರಿಕೆ: ತೈಲ ಮಾರುಕಟ್ಟೆ ಕಂಪನಿಗಳ ಷೇರುಗಳ ಬೆಲೆ ಜಿಗಿತ

ಪೆಟ್ರೋಲ್, ಡೀಸೆಲ್ ದರ ಏರಿಕೆ: ತೈಲ ಮಾರುಕಟ್ಟೆ ಕಂಪನಿಗಳ ಷೇರುಗಳ ಬೆಲೆ ಜಿಗಿತ

ವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 90 ಪೈಸೆ ಏರಿಕೆ ಮಾಡಿದ ಬಳಿಕ ಎಚ್‌ಪಿಸಿಎಲ್ ಮತ್ತು ಐಒಸಿ ಸೇರಿದಂತೆ ತೈಲ ಮಾರುಕಟ್ಟೆ ಕಂಪನಿಗಳ ಷೇರುಗಳ ಬೆಲೆಯಲ್ಲಿ ಮಂಗಳವಾರ ಶೇ 3ರಷ್ಟು ಏರಿಕೆ ಕಂಡುಬಂದಿದೆ.

ವಾರಕ್ಕೂ ಕಡಿಮೆ ಸಮಯದಲ್ಲಿ ತೈಲ ಬೆಲೆಯಲ್ಲಿ ಎರಡನೇ ಬಾರಿಗೆ ಏರಿಕೆ ಮಾಡಲಾಗಿದೆ.

ಬಿಎಸ್‌ಇಯ ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ ಷೇರು ಬೆಲೆ ಶೇ 3.29ರಷ್ಟು, ಇಂಡಿಯನ್ ಆಯಿಲ್ ಕಾರ್ಪೊರೇಶನ್ ಷೇರು ಬೆಲೆ ಶೇ 3.10ರಷ್ಟು ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಷೇರು ಬೆಲೆ ಶೇ 3ರಷ್ಟು ಏರಿಕೆ ದಾಖಲಿಸಿದೆ.

ಕಳೆದ ಶುಕ್ರವಾರವಷ್ಟೇ 4 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ₹3 ಹೆಚ್ಚಳ ಮಾಡಲಾಗಿತ್ತು.

ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ಜಾಗತಿಕ ತೈಲ ಸರಬರಾಜಿನ ಪ್ರಮುಖ ಮಾರ್ಗಗಳಲ್ಲೊಂದಾದ ಹೊರ್ಮುಜ್ ಜಲಸಂಧಿಗೆ ತೊಡಕಾಗಿದ್ದು, ತೈಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ, ಕಚ್ಚಾತೈಲದ ಬೆಲೆ ಗಗನಮುಖಿಯಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Prajavani