Dailyhunt Logo
  • Light mode
    Follow system
    Dark mode
    • Play Story
    • App Story
PHOTOS: ಪತ್ನಿ, ಮಕ್ಕಳೊಂದಿಗೆ ಪ್ರಕೃತಿ ಮಡಿಲಲ್ಲಿ ಮಿಂದೆದ್ದ ರಿಷಬ್ ಶೆಟ್ಟಿ

PHOTOS: ಪತ್ನಿ, ಮಕ್ಕಳೊಂದಿಗೆ ಪ್ರಕೃತಿ ಮಡಿಲಲ್ಲಿ ಮಿಂದೆದ್ದ ರಿಷಬ್ ಶೆಟ್ಟಿ

ಸ್ಯಾಂಡಲ್‌ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಸದ್ಯ ಕುಟುಂಬದ ಜೊತೆಗೆ ಕಾಲ ಕಳೆಯುತ್ತಿದ್ದಾರೆ.

ಸದಾ ಸಿನಿಮಾ ಕೆಲಸಗಳಲ್ಲಿ ಸಕ್ರಿಯರಾಗಿರುವ ರಿಷಬ್, ಪತ್ನಿ ಹಾಗೂ ಮಕ್ಕಳೊಂದಿಗೆ ನಿಸರ್ಗದ ಮಡಿಲಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಆ ಸುಂದರ ಫೋಟೊಗಳನ್ನು ರಿಷಬ್ ಶೆಟ್ಟಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಪತ್ನಿ ಪ್ರಗತಿ, ಪುತ್ರ ರಣ್ವಿತ್ ಶೆಟ್ಟಿ ಮತ್ತು ಮಗಳು ರಾಧ್ಯಾ ಶೆಟ್ಟಿ ಜೊತೆಗೆ ಫೋಟೊಗೆ ಪೋಸ್‌ ಕೊಟ್ಟು ಪ್ರಕೃತಿ ಸೌಂದರ್ಯವನ್ನು ಸವಿದಿದ್ದಾರೆ.

2017 ಫೆಬ್ರುವರಿ 9ರಂದು ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ದಂಪತಿಗೆ ಗಂಡು ಹಾಗೂ ಹೆಣ್ಣು ಮಗು ಇದೆ.

ಇನ್ನು, ನಟ ರಿಷಬ್ ಶೆಟ್ಟಿ ಅವರು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡ ಫೋಟೊಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Prajavani