ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕ್ರಿಮಿನಲ್ ಶಿಕ್ಷಣ ಸಚಿವರಾಗಿದ್ದು ಅವರನ್ನು ತಕ್ಷಣವೇ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ನಮ್ಮ ಶೈಕ್ಷಣಿಕ ವ್ಯವಸ್ಥೆಯ ಸಂಪೂರ್ಣ ಪತನಕ್ಕೆ ಧರ್ಮೇಂದ್ರ ಪ್ರಧಾನ್ ಅವರೇ ಕಾರಣ.
ಇಂದು ಸಾವಿರಾರು ಜನರು ಬೀದಿಗಿಳಿದು ಹೋರಾಡುತ್ತಿರುವುದಕ್ಕೆ ಅವರೇ ನೇರ ಕಾರಣ. ಅವರು ತಮ್ಮ ಹುದ್ದೆಯಿಂದ ತೊಲಗಲೇಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಪ್ರಧಾನ್ ಅವರನ್ನು ಹುದ್ದೆಯಿಂದ ವಜಾಗೊಳಿಸುವವರೆಗೆ ಸರ್ಕಾರದೊಂದಿಗೆ ಯಾವುದೇ ಚರ್ಚೆ ಅಥವಾ ಮಾತುಕತೆ ನಡೆಸುವುದಿಲ್ಲ ಎಂದು ರಾಹುಲ್ ಗಾಂಧಿ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಲೋಕಸಭೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಲು ತಮಗೆ ಅವಕಾಶ ನೀಡಲು ಸರ್ಕಾರ ನಿರಾಕರಿಸಿದೆ ಎಂದೂ ಅವರು ಆರೋಪಿಸಿದರು.
ವಿದ್ಯಾರ್ಥಿಗಳ ಪ್ರಮುಖ ಮೂರು ಬೇಡಿಕೆಗಳಾದ ಭ್ರಷ್ಟ ಶಿಕ್ಷಣ ಸಚಿವರು ಹುದ್ದೆಯಿಂದ ಕೆಳಗಿಳಿಯಬೇಕು, ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಪ್ರಧಾನಿಯವರು ವಿದ್ಯಾರ್ಥಿಗಳ ಕ್ಷಮೆಯಾಚಿಸಬೇಕು ಎಂದು ರಾಹುಲ್ ಹೇಳಿದರು. ಪ್ರಧಾನ್ ವಜಾಗೊಳಿಸುವವರೆಗೂ ನಾವು ಸರ್ಕಾರದೊಂದಿಗೆ ಯಾವುದೇ ಮಾತುಕತೆ ಅಥವಾ ಚರ್ಚೆ ನಡೆಸುವುದಿಲ್ಲ ಎಂದರು.
ಭ್ರಷ್ಟ ಸಚಿವ ಪ್ರಧಾನ್ ರಾಜೀನಾಮೆ ನೀಡುವವರೆಗೆ ಚರ್ಚೆಯಿಲ್ಲ: ರಾಹುಲ್ ಗಾಂಧಿವಿದ್ಯಾರ್ಥಿಗಳ ತಡೆಯಲು ನಿಮಗೆಷ್ಟು ಧೈರ್ಯ?: ದೆಹಲಿ ವಿವಿ ವಿರುದ್ಧ ರಾಹುಲ್ ಕಿಡಿ
