ನವದೆಹಲಿ (ಪಿಟಿಐ): ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್ (75) ಅವರು ಬುಧವಾರ ಬೆಳಿಗ್ಗೆ ವಾಯು ವಿಹಾರ ಮಾಡುತ್ತಿದ್ದಾಗ ಪ್ರಜ್ಞೆ ತಪ್ಪಿ ಬಿದ್ದಿದ್ದು, ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಧನಕರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜ್ಞಾಹೀನರಾಗಿದ್ದ ಧನಕರ್ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಆದರೂ, ಅವರ ಸ್ಥಿತಿ ಗಂಭೀರವಾಗಿದ್ದ ಕಾರಣ ಆಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

