Dailyhunt Logo
  • Light mode
    Follow system
    Dark mode
    • Play Story
    • App Story
'ಪ್ರಜಾವಾಣಿ' ವರದಿಗೆ ಸಿಎಂ ಕಚೇರಿಯ ಸ್ಪಂದನೆ

'ಪ್ರಜಾವಾಣಿ' ವರದಿಗೆ ಸಿಎಂ ಕಚೇರಿಯ ಸ್ಪಂದನೆ

ಕೊಪ್ಪಳ: ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಬೋದೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳ ಚಾವಣೆಯ ಸಿಮೆಂಟ್‌ ಉದುರುತ್ತಿರುವ ಬಗ್ಗೆ ‍ಪ್ರಜಾವಾಣಿಯಲ್ಲಿ ಸೆಪ್ಟೆಂಬರ್‌ 10ರಂದು ಪ್ರಕಟವಾಗಿದ್ದ ವಿಶೇಷ ವರದಿಗೆ ಮುಖ್ಯಮಂತ್ರಿಗಳ ಕಚೇರಿ ಸ್ಪಂದಿಸಿದೆ.

ವರದಿಯನ್ನು ಉಲ್ಲೇಖಿಸಿ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಕೆ. ವೈಷ್ಣವಿ ಅವರು ಯಲಬುರ್ಗಾ ಕ್ಷೇತ್ರ ಶಿಕ್ಷಣಾಧಿಕಾರಿಗೆ ಪತ್ರ ಬರೆದು ಈ ಕುರಿತು ವಿವರವಾದ ವರದಿ ನೀಡುವಂತೆ ಸೂಚಿಸಿದ್ದರು.

ಪತ್ರಕ್ಕೆ ಪ್ರತಿಕ್ರಿಯಿಸಿರುವ ಬಿಇಒ 'ಶಾಲೆಯ ಪ್ರಸ್ತುತ ಕಟ್ಟಡದ ಪರಿಸ್ಥಿತಿ ಪರಿಶೀಲಿಸಲಾಗಿದ್ದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸುರಕ್ಷಿತ ಕೊಠಡಿಗಳಲ್ಲಿ ಮಾತ್ರ ಬೋಧನೆ ಮಾಡಲಾಗುತ್ತಿದೆ. ಮಕ್ಕಳು ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳತ್ತ ಹೋಗದಂತೆ ಎಚ್ಚರಿಕೆ ವಹಿಸಲಾಗಿದೆ' ಎಂದು ತಿಳಿಸಿದ್ದಾರೆ.

ಮುಂದುವರಿದು ಶಾಲೆಗೆ ಎರಡು ಹೊಸ ಕೊಠಡಿಗಳ ಅಗತ್ಯವಿದ್ದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಹಾಗೂ ಆವಿಷ್ಕಾರ ಯೋಜನೆಯಡಿ ಎರಡು ಕೊಠಡಿಗಳ ನಿರ್ಮಾಣಕ್ಕೆ ಅಗತ್ಯ ಪ್ರಸ್ತಾವ ಸಿದ್ಧಪಡಿಸಲಾಗುವುದು ಎಂದು ಹೇಳಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Prajavani