ನಟ ಪ್ರಜ್ವಲ್ ದೇವರಾಜ್ ನಟನೆಯ ಬಹುನಿರೀಕ್ಷಿತ 'ಕರಾವಳಿ' ಸಿನಿಮಾದ ಡಬ್ಬಿಂಗ್ ಹಾಗೂ ಸಂಭಾವನೆ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇತ್ತೀಚೆಗಷ್ಟೇ 'ಕರಾವಳಿ' ಸಿನಿಮಾದಲ್ಲಿ ನಟ ಪ್ರಜ್ವಲ್ ದೇವರಾಜ್ ಅವರ ಧ್ವನಿಯನ್ನು ಬೇರೊಬ್ಬರಿಂದ ಡಬ್ಬಿಂಗ್ ಮಾಡಿಸಿರುವ ಕುರಿತು ಚಿತ್ರರಂಗದಲ್ಲಿ ಭಾರಿ ಚರ್ಚೆ ನಡೆದಿತ್ತು.
ಇದೀಗ ಚಿತ್ರದ ನಿರ್ಮಾಣ ಸಂಸ್ಥೆಯಾದ 'ಗುರುದತ್ತ ಗಾಣಿಗ ಫಿಲ್ಮ್ಸ್' ಅಧಿಕೃತ ಪ್ರಕಟಣೆ ಹೊರಡಿಸುವ ಮೂಲಕ ನಟ ಪ್ರಜ್ವಲ್ ದೇವರಾಜ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸ್ ದೂರು ದಾಖಲಿಸಿರುವುದಾಗಿ ತಿಳಿಸಿದೆ.
ಪ್ರಜ್ವಲ್ ಪಾತ್ರಕ್ಕೆ ಅವರ ಧ್ವನಿ ಸೂಟ್ ಆಗಿಲ್ಲ ಅನ್ಸುತ್ತೆ: ನಿರ್ದೇಶಕ ಮಿತ್ರಹಣದ ವಿಚಾರಕ್ಕೆ ನಟ-ನಟಿಯರ ಧ್ವನಿ ಕಿತ್ತುಕೊಳ್ಳುವುದು ಅನ್ಯಾಯ: ರಕ್ಷಿತಾ ಪ್ರೇಮ್
ಗುರುದತ್ತ ಗಾಣಿಗ ಫಿಲ್ಮ್ಸ್ ಹೊರಡಿಸಿದ ಪ್ರಕಟಣೆಯಲ್ಲಿ ಏನಿದೆ?
'ಕರಾವಳಿ' ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಅನಧಿಕೃತವಾಗಿ ಪ್ರವೇಶಿಸಿ ಅಡ್ಡಿಪಡಿಸಲು ಪ್ರಯತ್ನಿಸಿರುವ ಅಪರಿಚಿತರ ವಿರುದ್ಧ ನಿರ್ಮಾಣ ಸಂಸ್ಥೆ ಪೊಲೀಸರಿಗೆ ದೂರನ್ನು ನೀಡಿದೆ. ನಟ ಪ್ರಜ್ವಲ್ ದೇವರಾಜ್ ಅವರಿಗೆ ಕೊಡಲು ಬಾಕಿ ಇದ್ದ ಹಣವನ್ನು ಘಟನೆ ನಡೆದ ಮರುದಿನವೇ ಪಾವತಿಸಲಾಗಿದೆ' ಎಂದಿದೆ.
'ನಟ ಪ್ರಜ್ವಲ್ ದೇವರಾಜ್ ಅವರು ಕರಾವಳಿ ಚಿತ್ರದಲ್ಲಿನ ಪಾತ್ರಕ್ಕಾಗಿ ದೈಹಿಕವಾಗಿ ಬದಲಾಗಲು ಒಪ್ಪಿಕೊಂಡಿದ್ದರು ಮತ್ತು ಅದು ಕಥೆಗೆ ಬಹುಮುಖ್ಯವಾಗಿತ್ತು. ಅದೇ ಕಾರಣಕ್ಕಾಗಿ ಅಷ್ಟು ದೊಡ್ಡ ಮೊತ್ತವನ್ನು ಸಂಭಾವನೆಯಾಗಿ ಕೊಡಲು ನಿರ್ಮಾಣ ಸಂಸ್ಥೆ ಒಪ್ಪಿಕೊಂಡಿತ್ತು. ಆದರೆ ಸಿನಿಮಾಗಾಗಿ ಸಿಕ್ಸ್ ಪ್ಯಾಕ್ ಮಾಡಲು ಸಾಧ್ಯವಾಗದೆ ಇದ್ದಿದ್ದರಿಂದ ಉಳಿದ ಹಣವನ್ನು ಬಾಕಿಯಾಗಿ ಉಳಿಸಿಕೊಳ್ಳಲಾಗಿತ್ತು' ಎಂದು ವಿವರಿಸಿದ್ದಾರೆ.
'ಪ್ರಜ್ವಲ್ ದೇವರಾಜ್ ಅವರು ಬಾಕಿ ಹಣವನ್ನು ನೀಡದೆ ಡಬ್ಬಿಂಗ್ ಮಾಡುವುದಿಲ್ಲವೆಂದು ಖಡಾಖಂಡಿತವಾಗಿ ಹೇಳಿದ್ದರಿಂದ, ಅವರಿಗಾಗಿ ಎರಡು ತಿಂಗಳು ಕಾದ ನಂತರ, ಅನಿವಾರ್ಯವಾಗಿ ಬೇರೆಯವರಿಂದ ಡಬ್ಬಿಂಗ್ ಮಾಡಿಸಲಾಯಿತು. ಈ ಬಗ್ಗೆ ನಟ ಪ್ರಜ್ವಲ್ ದೇವರಾಜ್ ಅವರನ್ನು ಹಲವಾರು ಬಾರಿ ಸಂಪರ್ಕಿಸಲು ಪ್ರಯತ್ನಿಸಿದರೂ ಅವರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ ಹಾಗೂ ಸಿನಿರಂಗದ ಪ್ರಮುಖರು ಮತ್ತು ನಿರ್ಮಾಪಕರಾದ ಕೆವಿಎನ್ ಸಂಸ್ಥೆಯ ಸುಪ್ರಿತ್, ಜಾಕ್ ಮಂಜು ಮತ್ತು ಲೋಹಿತ್ ಅವರೆಲ್ಲರೂ ಪ್ರತ್ಯೇಕವಾಗಿ ಸಂಪರ್ಕಿಸಿ ಮಧ್ಯಸ್ಥಿಕೆಗೆ ಪ್ರಯತ್ನಿಸಿದರಾದರೂ ಅದು ವಿಫಲವಾಗಿ, ಬಾಕಿ ಹಣ ಪಾವತಿಸುವವರೆಗೂ ಕರಾವಳಿ ಚಿತ್ರದ ಯಾವುದೇ ಕೆಲಸಗಳಲ್ಲೂ ಭಾಗಿಯಾಗುವುದಿಲ್ಲವೆಂದು ಹೇಳಿದರು'.
ಟ್ರೇಲರ್‌ನಲ್ಲಿ ಅವರ ಧ್ವನಿ ಇಲ್ಲವೆನ್ನುವುದು ನಟ ಪ್ರಜ್ವಲ್ ದೇವರಾಜ್ ಅವರಿಗೆ ತಿಳಿದಿತ್ತು ಮತ್ತು ಬೇರೆಯವರಿಂದ ಡಬ್ಬಿಂಗ್ ಮಾಡಿಸಿರುವ ವಿಚಾರವನ್ನು ಅವರ ಮ್ಯಾನೇಜರ್ ಮೂಲಕ ತಲುಪಿಸಲಾಗಿತ್ತು. ಇಷ್ಟಾಗಿಯೂ ಬಾಕಿ ಇರುವ ಹಣ ತಲುಪಿದ ಮೇಲೂ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತ ಖಾತೆಗಳಿಂದ ಇಲ್ಲ-ಸಲ್ಲದ ಆರೋಪ ಮಾಡುತ್ತ ಕರಾವಳಿ ಸಿನಿಮಾ, ನಿರ್ದೇಶಕರು ಮತ್ತು ನಿರ್ಮಾಣ ಸಂಸ್ಥೆಯ ಮೇಲೆ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ತನಿಖೆ ನಡೆಸಬೇಕು' ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

