Dailyhunt Logo
  • Light mode
    Follow system
    Dark mode
    • Play Story
    • App Story
ಪ್ರಶಾಂತ್ ಕಿಶೋರ್ ಆಸ್ತಿ ಮೌಲ್ಯ ₹96 ಕೋಟಿ: ಚುನಾವಣಾ ಅಫಿಡವಿಟ್‌ನಲ್ಲಿ ಉಲ್ಲೇಖ

ಪ್ರಶಾಂತ್ ಕಿಶೋರ್ ಆಸ್ತಿ ಮೌಲ್ಯ ₹96 ಕೋಟಿ: ಚುನಾವಣಾ ಅಫಿಡವಿಟ್‌ನಲ್ಲಿ ಉಲ್ಲೇಖ

ಟ್ನಾ: ಬಿಹಾರದ ಬಂಕಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಜನ ಸುರಾಜ್ ಪಕ್ಷದ ಸ್ಥಾಪಕ ಪ್ರಶಾಂತ್ ಕಿಶೋರ್ ಅವರ ಆಸ್ತಿ ಮೌಲ್ಯವು ₹96 ಕೋಟಿ ಎಂದು ಚುನಾವಣಾ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರ ರಾಜೀನಾಮೆಯಿಂದ ತೆರವಾಗಿರುವ ಬಂಕಿಪುರ ಕ್ಷೇತ್ರದಲ್ಲಿನ ಉಪಚುನಾವಣೆಗಾಗಿ ಪ್ರಶಾಂತ್ ಕಿಶೋರ್ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಇದೇ ಮೊದಲ ಬಾರಿ ಅವರು ಚುನಾವಣೆಯಲ್ಲಿ ಕಣಕ್ಕಿಳಿಯುತ್ತಿದ್ದಾರೆ.

ಈ ವೇಳೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ₹22.19 ಕೋಟಿ ಮೌಲ್ಯದ ಚರಾಸ್ತಿ ಮತ್ತು ₹73.87 ಕೋಟಿ ಮೌಲ್ಯದ ಸ್ಥಿರಾಸ್ತಿ ಇರುವುದಾಗಿ ಉಲ್ಲೇಖಿಸಿದ್ದಾರೆ. ₹5.77 ಕೋಟಿ ಬ್ಯಾಂಕ್‌ ಸಾಲ ಹೊಂದಿದ್ದಾರೆ.

ಪ್ರಶಾಂತ್ ಕಿಶೋರ್ ಅವರ ಪತ್ನಿ ಜಾಹ್ನವಿ ದಾಸ್ ಅವರು ₹89.51 ಕೋಟಿ ಮೌಲ್ಯದ ಸ್ಥಿರಾಸ್ತಿ ಹಾಗೂ ₹12.42 ಕೋಟಿ ಮೌಲ್ಯದ ಚರಾಸ್ತಿ ಹೊಂದಿದ್ದಾರೆ.

ಐಪ್ಯಾಕ್‌ ಸಂಸ್ಥಾಪಕರಾಗಿರುವ ಪ್ರಶಾಂತ್ ಕಿಶೋರ್ ಅವರು ಅದರ ಮೇಲೆ ಸಂಪೂರ್ಣ ಹಿಡಿತ ಹೊಂದಿದ್ದಾರೆ. 2024-25ನೇ ಸಾಲಿನಲ್ಲಿ ಈ ಕಂಪನಿಯು ಜನ ಸುರಾಜ್ ಪಕ್ಷಕ್ಕೆ ₹85 ಕೋಟಿ ಮತ್ತು ಜನ ಸ್ವರಾಜ್ ಫೌಂಡೇಶನ್‌ಗೆ ₹50 ಲಕ್ಷ ದೇಣಿಗೆ ನೀಡಿದ್ದರು.

ಬಿಜೆಪಿ‌ ಯುವ ಮೋರ್ಚಾ ಘಟಕದ ನಾಯಕ ನೀರಜ್ ಕುಮಾರ್ ಸಿನ್ಹಾ ಅವರು ಪ್ರಶಾಂತ್ ಕಿಶೋರ್‌ಗೆ ಪ್ರಮುಖ ಎದುರಾಳಿಯಾಗಿದ್ದಾರೆ.

ಜುಲೈ 30ರಂದು ಬಂಕಿಪುರ ಕ್ಷೇತ್ರದಲ್ಲಿನ ಉಪಚುನಾವಣೆಯ ಮತದಾನ ನಡೆಯಲಿದ್ದು, ಆಗಸ್ಟ್‌ 3ರಂದು ಮತ ಎಣಿಕೆ ನಡೆಯಲಿದೆ.

ನಿತಿನ್ ನವೀನ್ ಕ್ಷೇತ್ರದ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ ಪ್ರಶಾಂತ್ ಕಿಶೋರ್
Dailyhunt
Disclaimer: This content has not been generated, created or edited by Dailyhunt. Publisher: Prajavani