ಚಂಡೀಗಡ: 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಆಡಳಿತರೂಢ ಆಮ್‌ಆದ್ಮಿ ಪಕ್ಷವು ತಮ್ಮ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. 40 ಮಂದಿ ಹಾಲಿ ಶಾಸಕರಿಗೆ ತಾವು ಪ್ರತಿನಿಧಿಸುವ ಕ್ಷೇತ್ರಗಳಿಂದಲೇ ಟಿಕೆಟ್ ನೀಡಲಾಗಿದ್ದು, ಮುಖ್ಯಮಂತ್ರಿ ಭಗವಂತ್ ಮಾನ್ ಅವರು 'ಧುರಿ' ವಿಧಾನಸಭಾ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸಲು ಅಣಿಯಾಗಿದ್ದಾರೆ.
ರಾಜ್ಯ ವಿಧಾನಸಭೆಯ ಅವಧಿಯು ಮುಂದಿನ ಮಾರ್ಚ್ ತಿಂಗಳ ವೇಳೆಗೆ ಕೊನೆಯಾಗಲಿದ್ದು, ಈಗಿನಿಂದಲೇ ರಾಜಕೀಯ ಪಕ್ಷಗಳು ಚುನಾವಣಾ ಸಿದ್ಧತೆಗಳನ್ನು ಆರಂಭಿಸಿದೆ. ಆಮ್‌ಆದ್ಮಿ ಪಕ್ಷ ಮೊದಲಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.
ನವದೆಹಲಿಯಲ್ಲಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿ (ಪಿಎಸಿ)ಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಮಾನ್ ಅವರು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದಾರೆ.
ಮೊದಲ ಬಾರಿ ಶಾಸಕರಾಗಿರುವ ಮಾನ್ ಅವರು ಸಂಗ್ರೂರ್ ಜಿಲ್ಲೆಯ 'ಧುರಿ' ಕ್ಷೇತ್ರದಿಂದಲೇ ಮತ್ತೆ ಸ್ಪರ್ಧಿಸಲಿದ್ದಾರೆ ಎಂದು ಪಟ್ಟಿಯಲ್ಲಿ ತಿಳಿಸಲಾಗಿದೆ.
ಉಳಿದಂತೆ ಜಿಎಸ್‌ಟಿ ವಂಚನೆ ನಡೆಸಿ, ಹಣಕಾಸು ಅಕ್ರಮ ವಹಿವಾಟು ನಡೆಸಿದ ಆರೋಪದ ಮೇಲೆ ಜೈಲಿನಲ್ಲಿರುವ ಸಂಜೀವ್ ಅರೋರಾ ಅವರು ಕೂಡ ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಉಳಿದಂತೆ ಯಾವ ಸಚಿವರು ಕೂಡ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ. ಉಳಿದಂತೆ ಮೂವರು ಮಾಜಿ ಸಚಿವರ ಹೆಸರು ಪಟ್ಟಿಯಲ್ಲಿದೆ.
ಪಟ್ಟಿಯಲ್ಲಿ ಸ್ಥಾನ ಪಡೆದ ಎಲ್ಲ ಅಭ್ಯರ್ಥಿಗಳಿಗೂ ಆಮ್‌ಆದ್ಮಿ ಪಕ್ಷದ ರಾಷ್ಟ್ರೀಯ ಸಂಯೋಜಕ ಅರವಿಂದ್ ಕೇಜ್ರಿವಾಲ್ ಅವರು ಶುಭಾಶಯ ಸಲ್ಲಿಸಿದ್ದಾರೆ.

