ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳ 500 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ.
ಇಂತಹ ಗ್ರಾಮಗಳಿಗೆ ಖಾಸಗಿ ಕೊಳವೆಬಾವಿ ಮತ್ತು ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಮುಂಗಾರಿನಲ್ಲಿ ವಾಡಿಕೆ ಪ್ರಕಾರ ಮಳೆ ಬಾರದೆ ಇರುವುದರಿಂದ ಇನ್ನಷ್ಟು ಗ್ರಾಮಗಳಲ್ಲಿ ನೀರಿನ ಅಭಾವ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
ಮಾರ್ಚ್‌ನಲ್ಲಿ 230 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇತ್ತು. ಈಗ ಅಂತಹ ಗ್ರಾಮಗಳ ಸಂಖ್ಯೆ 500ಕ್ಕೆ ಏರಿದೆ. 145 ಟ್ಯಾಂಕರ್‌ಗಳು ಮತ್ತು 618 ಖಾಸಗಿ ಕೊಳವೆಬಾವಿಗಳನ್ನು
ಒಪ್ಪಂದದ ಮೂಲಕ ಬಾಡಿಗೆಗೆ ಪಡೆದು, ಅವುಗಳ ಮೂಲಕ ಜನರಿಗೆ ನೀರು ಪೂರೈಸಲಾಗುತ್ತಿದೆ.
'ಸಾಮಾನ್ಯವಾಗಿ ಮಾರ್ಚ್ ನಿಂದ ಮೇ ತಿಂಗಳವರೆಗೆ ಕುಡಿಯುವ ನೀರಿನ ಅಭಾವ ಇರುತ್ತದೆ. ಜೂನ್‌ನಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಬರುತ್ತದೆ. ಆದರೆ, ಈ ವರ್ಷ ಜೂನ್‌ನಲ್ಲಿ ಮಳೆ ಕೊರತೆಯಾಗಿರುವ ಕಾರಣ ನೀರಿನ ಸಮಸ್ಯೆ ಇರುವ ಗ್ರಾಮಗಳ ಸಂಖ್ಯೆ ಹೆಚ್ಚಾಗಿದೆ' ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮೂಲಗಳು 'ಪ್ರಜಾವಾಣಿ'ಗೆ ತಿಳಿಸಿವೆ. ಎಲ್ ನಿನೊ ಪರಿಣಾಮದಿಂದಾಗಿ ಮುಂಗಾರು ಮಳೆ ಕೊರತೆಯಾಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ.
ಫೌಜಿಯಾ ತರನ್ನುಮ್, ಆಯುಕ್ತೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಮೂಲಕ ನೀರಿನ ಮಿತ ಬಳಕೆ ಮತ್ತು ಗುಣಮಟ್ಟದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಪರ್ಯಾಯವಾಗಿ ಏನೇನು ಕ್ರಮ?
ನೀರನ್ನು ಮಿತವಾಗಿ ಬಳಸಲು ಸಾರ್ವಜನಿಕರಲ್ಲಿ ಅರಿವು
ಖಾಸಗಿ ಕೊಳವೆಬಾವಿಗಳು ಇಲಾಖೆಯ ವಶಕ್ಕೆ
ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ
ಅನಿವಾರ್ಯವಾದರೆ ಹೊಸ ಕೊಳವೆ ಬಾವಿ ಕೊರೆಯುವುದು

