Dailyhunt Logo
  • Light mode
    Follow system
    Dark mode
    • Play Story
    • App Story
ರಾಮನಗರ ಜಿಲ್ಲೆಯಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಶೇ 27ರಷ್ಟು ಪ್ರಗತಿ

ರಾಮನಗರ ಜಿಲ್ಲೆಯಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಶೇ 27ರಷ್ಟು ಪ್ರಗತಿ

ರಾಮನಗರ: 'ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯದಾದ್ಯಂತ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-2026 (ಎಸ್‌ಐಆರ್) ಕಾರ್ಯವು ಜೂನ್‌ 30ರಿಂದ ಆರಂಭಗೊಂಡಿದೆ. ಜಿಲ್ಲೆಯಲ್ಲಿ ಇದುವರೆಗೂ 2,59,968 ಮತದಾರರಿಗೆ ಎನ್ಯೂಮರೇಷನ್ ಫಾರ್ಮ್‌ಗಳನ್ನು ನೀಡಲಾಗಿದೆ. ಜಿಲ್ಲೆಯು ಶೇ 27.70ರಷ್ಟು ಪ್ರಗತಿ ಸಾಧಿಸಿದೆ' ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಂಜುನಾಥ್ ಜೆ.

ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಗಂಣದಲ್ಲಿ ಎಸ್‌ಐಆರ್ ಕುರಿತಂತೆ ಶುಕ್ರವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, 'ಈ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿ ವ್ಯವಸ್ಥಿತವಾಗಿ ನಿಗದಿತ ಅವಧಿಯೊಳಗೆ ಕೆಲಸ ಮುಗಿಸಬೇಕು. ಪಾರದರ್ಶಕವಾಗಿ ಹಾಗೂ ಎಚ್ಚರಿಕೆಯಿಂದ ಕೆಲಸ ಮಾಡಬೇಕು' ಎಂದರು.

'ರಾಜ್ಯದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಮತದಾರರ ವಿಶೇಷ ಪರಿಷ್ಕರಣೆ ಕಾರ್ಯದ ಶೇಕಡವಾರು ಹೆಚ್ಚಬೇಕು. ಅದಕ್ಕಾಗಿ ಕಾರ್ಯವನ್ನು ಚುರುಕುಗೊಳಿಸಬೇಕು. ಎಸ್‌ಐಆರ್ ಕಾರ್ಯಕ್ಕೆ ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು, ಮೇಲ್ವಿಚಾರಕರು, ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಉತ್ತಮವಾಗಿ ಕಾರ್ಯನಿರ್ವಹಿಸಬೇಕು' ಎಂದು ಸೂಚಿಸಿದರು.

'ಜಿಲ್ಲೆಯ 1,154 ಬಿಎಲ್‌ಒಗಳು ಎಸ್‌ಐಆರ್‌ನಲ್ಲಿ ನಿರತರಾಗಿದ್ದಾರೆ. ಬಿಎಲ್‌ಒಗಳ ಮೇಲ್ವಿಚಾರಣೆಗಾಗಿ ಸೂಪರ್‌ವೈಸರ್‌ಗಳು ಹಾಗೂ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಈ ಅಧಿಕಾರಿಗಳು ಕಡ್ಡಾಯವಾಗಿ ಬಿಎಲ್‌ಒಗಳು ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಶನ್ ಫಾರ್ಮ್‌ಗಳನ್ನು ನೀಡುತ್ತಿದ್ದಾರೆಯೇ ಎಂಬುದರ ಕುರಿತು ಪರಿಶೀಲಸಿ ವರದಿ ನೀಡಬೇಕು' ಎಂದರು.

'ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಪರಿಶೀಲಿಸುವ ಕಾರ್ಯವನ್ನು ಅಚ್ಚುಕಟ್ಟಾಗಿ ಯಾವುದೇ ಲೋಪವಿಲ್ಲದೇ ನಿಭಾಯಿಸಬೇಕು. ಆ ಮೂಲಕ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಸಮರ್ಥವಾಗಿ ನಿರ್ವಹಿಸಿ ಯಶಸ್ವಿಗೊಳಿಸಬೇಕು' ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ, ತಹಶೀಲ್ದಾರರು, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-14-604752067

Dailyhunt
Disclaimer: This content has not been generated, created or edited by Dailyhunt. Publisher: Prajavani