Dailyhunt Logo
  • Light mode
    Follow system
    Dark mode
    • Play Story
    • App Story
ರಾಮನಗರದಲ್ಲಿ ನ. 11 ರಂದು ಒನಕೆ ಓಬವ್ವ ಜಯಂತಿ ಆಚರಣೆ ಪೂರ್ವಭಾವಿ ಸಭೆ

ರಾಮನಗರದಲ್ಲಿ ನ. 11 ರಂದು ಒನಕೆ ಓಬವ್ವ ಜಯಂತಿ ಆಚರಣೆ ಪೂರ್ವಭಾವಿ ಸಭೆ

ರಾಮನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ನ. 11ರಂದು ಹಮ್ಮಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದ 2ನೇ ಮಹಡಿಯ ಕೊಠಡಿ ಸಂಖ್ಯೆ- 304ರಲ್ಲಿ ಆಯೋಜಿಸಲಾಗಿದೆ.

ಓಬವ್ವ ಜಯಂತಿ ಕಾರ್ಯಕ್ರಮ ಆಚರಣೆಯ ರೂಪುರೇಷೆಗಳ ಕುರಿತು ಚರ್ಚಿಸಲು ಜಿಲ್ಲೆಯ ಎಲ್ಲಾ ಸಮುದಾಯದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಮುಖಂಡರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಪೂರ್ವಭಾವಿ ಸಭೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

261104-14-1374242278

Dailyhunt
Disclaimer: This content has not been generated, created or edited by Dailyhunt. Publisher: Prajavani