Dailyhunt Logo
  • Light mode
    Follow system
    Dark mode
    • Play Story
    • App Story
ರಾಯಚೂರು: ನಮ್ಮ ಕ್ಲಿನಿಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ರಾಯಚೂರು: ನಮ್ಮ ಕ್ಲಿನಿಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ರಾಯಚೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಮ್ಮ ಕ್ಲಿನಿಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ನಮ್ಮ ಕ್ಲಿನಿಕ್‌ಗಳಿಗೆ ಎಂಬಿಬಿಎಸ್ ವೈದ್ಯರು ಐದು ಹುದ್ದೆಗಳು, ಸ್ಟಾಫ್ ನರ್ಸ್ ಐದು ಹುದ್ದೆಗಳು, ಲ್ಯಾಬ್ ಟೆಕ್ನಿಷಿಯನ್ ಮೂರು ಹುದ್ದೆಗಳು, ಕಿರಿಯ ಆರೋಗ್ಯ ಸಹಾಯಕರು (ಮಹಿಳೆ) ಪಿ.ಎಚ್.ಸಿ.ಒ/ಎ.ಎನ್.ಎಂ 18 ಹುದ್ದೆಗಳು, ಔಷಧ ವಿತರಕರು ಒಂದು ಹುದ್ದೆ, ಕಿರಿಯ ಆರೋಗ್ಯ ಸಹಾಯಕರು (ಮಹಿಳೆ) ಪಿ.ಎಚ್.ಸಿ.ಒ/ಎ.ಎನ್.ಎಂ ಎರಡು ಹುದ್ದೆಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು (ಎಚ್.ಐ.ಒ) ಒಂದು ಹುದ್ದೆ ಸೇರಿ ಒಟ್ಟು-35 ಹುದ್ದೆಗಳ ಭರ್ತಿಗೆ ರಾಯಚೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಯೋಜನಾ ನಿರ್ವಹಣಾ ಘಟಕದ ಕಾರ್ಯಾಲಯಕ್ಕೆ ಆಗಸ್ಟ್ 17ರ ಸಂಜೆ 5.30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯೋಜನಾ ಅಭಿವೃದ್ಧಿ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ರಾಯಚೂರು ಇಲ್ಲಿಗೆ ಕಚೇರಿ ಅವಧಿಯಲ್ಲಿ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ. ದೂರವಾಣಿ ಸಂಖ್ಯೆ: 9449843121, 9844193931 ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260808-32-1992360956

Dailyhunt
Disclaimer: This content has not been generated, created or edited by Dailyhunt. Publisher: Prajavani