ಪುತ್ತೂರು: ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಕುರಿತು ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುನ್ನೆಚ್ಚರಿಕಾ ಕ್ರಮವಾಗಿ ಗುರುವಾರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದರೂ ಆದೇಶ ಉಲ್ಲಂಘಿಸಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದ ಪುತ್ತೂರಿನ ಖಾಸಗಿ ಕಾಲೇಜೊಂದಕ್ಕೆ ತಹಶೀಲ್ದಾರ್ ನೋಟೀಸ್ ಜಾರಿ ಮಾಡಿದ್ದಾರೆ.
ರಜೆ ಘೋಷಣೆ ಮಾಡಿರುವುದನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದರೂ ಈ ಕಾಲೇಜಿನಲ್ಲಿ ಪದವಿ ಪೂರ್ವ ವಿಭಾಗದಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡುತ್ತಿದ್ದ ಕುರಿತು ಬಂದ ಮಾಹಿತಿಯ ಹಿನ್ನಲೆಯಲ್ಲಿ ಕಾಲೇಜಿಗೆ ತೆರಳಿ ನೋಟೀಸ್ ನೀಡಿದ್ದೇವೆ ಎಂದು ತಹಶೀಲ್ದಾರ್ ಬಿ.ಎಸ್.ಕೂಡಲಗಿ ತಿಳಿಸಿದ್ದಾರೆ.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-29-2093862467

