ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿದಾರ ಸಂದೀಪ್‌ಗೆ ಬೆದರಿಕೆ ಹಾಕಿದ್ದ ಆರೋಪದಲ್ಲಿ ಮೂವರನ್ನು ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಪುನೀತ್, ವೇಣು ಹಾಗೂ ಸುಹಾಸ್ ಬಂಧಿತರು. ಬಂಧಿತರು ನಟ ದರ್ಶನ್ ಅವರ ಅಭಿಮಾನಿಗಳು ಎಂದು ಹೇಳಲಾಗಿದೆ.
ಬಂಧಿತರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸಂದೀಪ್ ನೀಡಿದ ದೂರಿನ ಮೇಲೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಬಂಧಿತ ಪುನೀತ್, ದರ್ಶನ್ ಫ್ಯಾನ್ ಪೇಜ್ 'ಡಿ ಕಂಪನಿ'ಯ ಅಡ್ಮಿನ್ ಆಗಿದ್ದಾನೆ ಎಂಬುದು ಪೊಲೀಸ್ ತನಿಖೆಯಿಂದ ಗೊತ್ತಾಗಿದೆ.
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಸ್ನೇಹಿತೆ ಪವಿತ್ರಾಗೌಡ ಸೇರಿದಂತೆ ಏಳು ಮಂದಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ.

