ಬೀದರ್: ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಸಿಂಗ್ ಅವರು ಬುಧವಾರ (ನ.4) ನಗರಕ್ಕೆ ಆಗಮಿಸಲಿದ್ದಾರೆ.
ಸಚಿವರಾದ ನಂತರ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡುತ್ತಿರುವುದರಿಂದ ಬೆಳಿಗ್ಗೆ 10.30ಕ್ಕೆ ನಗರದ ಶಹಾಪುರ ಗೇಟ್ ಬಳಿ ಅವರಿಗೆ ಭವ್ಯ ಸ್ವಾಗತ ಕೋರಿ ಬರಮಾಡಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಚಿವರು ಮಧ್ಯಾಹ್ನ 2ಕ್ಕೆ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಸನ್ಮಾನ ಸ್ವೀಕರಿಸಲಿದ್ದಾರೆ. ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
261104-33-83672584

