Dailyhunt Logo
  • Light mode
    Follow system
    Dark mode
    • Play Story
    • App Story
ಸಕ್ರಿಯ ಕ್ಷಯರೋಗ ಪತ್ತೆ ಕಾರ್ಯಕ್ರಮಕ್ಕೆ ಸಿಂಧನೂರಿನಲ್ಲಿ ಚಾಲನೆ

ಸಕ್ರಿಯ ಕ್ಷಯರೋಗ ಪತ್ತೆ ಕಾರ್ಯಕ್ರಮಕ್ಕೆ ಸಿಂಧನೂರಿನಲ್ಲಿ ಚಾಲನೆ

ಸಿಂಧನೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಅಧಿಕಾರಿಗಳ ಕಾರ್ಯಾಲಯ ರಾಯಚೂರು ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಿಂಧನೂರು ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಕ್ರಿಯ ಕ್ಷಯರೋಗ ಪತ್ತೆ ಕಾರ್ಯಕ್ರಮಕ್ಕೆ ನಗರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ.ಸುರೇಶಗೌಡ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಕ್ಷಯ ರೋಗವು ಸಾಂಕ್ರಾಮಿಕ ರೋಗವಾಗಿದ್ದು, ಇದನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಸರ್ಕಾರ ರಾಜ್ಯದಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಅದರಂತೆ ರಾಯಚೂರು ಜಿಲ್ಲೆಯಲ್ಲಿ ಕ್ಷಯರೋಗ ಪತ್ತೆ ಕಾರ್ಯಕ್ರಮ ಡಿ.8 ರವರೆಗೆ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ 24 ಸದಸ್ಯರು, ಮೇಲ್ವಿಚಾರಕರು ಹಾಗೂ 70 ಸಾವಿರ ಜನಸಂಖ್ಯೆ ತಂಡಗಳ ಸಂಖ್ಯೆ 65 ಇದ್ದು ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಸ್ವಯಂಸೇವಕರು ಕೆಲವು ಆಯ್ದ ಉಪಕೇಂದ್ರ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮನೆ ಮನೆಗೆ ಭೇಟಿ ಮಾಡಿ ಮನೆಯ ಸದಸ್ಯರ ಆರೋಗ್ಯ ವಿಚಾರಿಸಲಿದ್ದಾರೆ. ಅವರಿಗೆ ಸಾರ್ವಜನಿಕರು ಸಹಕರಿಸಬೇಕು' ಎಂದು ಹೇಳಿದರು.

261104-32-818462159

Dailyhunt
Disclaimer: This content has not been generated, created or edited by Dailyhunt. Publisher: Prajavani