ಸಂಡೂರು: ತಾಲ್ಲೂಕಿನ ತೋರಣಗಲ್ಲು ಹೋಬಳಿಯ ಬನ್ನಿಹಟ್ಟಿ, ನಾಗಲಾಪುರ, ತಾರಾನಗರ, ಜೋಗ, ತಾಳೂರು, ವಡ್ಡು ಗ್ರಾಮ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಗುರುವಾರ ಕೆಲಕಾಲ ಉತ್ತಮ ಮಳೆ ಸುರಿದಿದ್ದರಿಂದ ಜನರು ಸಂತಸಗೊಂಡಿದ್ದಾರೆ.
ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಮೋಡ ಮುಸುಕಿದ ವಾತಾವರಣದಿಂದ ಕೂಡಿತ್ತು.
ಸಂಜೆಯಾಗುತ್ತಿದ್ದಂತೆ ಮಳೆ ಆರಂಭವಾಯಿತು. 20 ನಿಮಿಷಕ್ಕೂ ಹೆಚ್ಚು ಸಮಯ ಮಳೆಯು ಬಿರುಸಾಗಿ ಸುರಿಯಿತು.
ಮಳೆಯು ಉತ್ತಮವಾಗಿ ಸುರಿದಿದ್ದರಿಂದ ರೈತರ ನೀರಾವರಿ ಜಮೀನುಗಳಲ್ಲಿನ ವಿವಿಧ ಬೆಳೆಗಳಿಗೆ ಬಹಳ ಅನುಕೂಲವಾಗಿದೆ. ಮಳೆ ಚೆನ್ನಾಗಿ ಸುರಿದಿದ್ದರಿಂದ ರಸ್ತೆ, ತಗ್ಗು ಪ್ರದೇಶಗಳಲ್ಲಿ ನೀರು ಸಂಗ್ರಹಗೊಂಡಿದ್ದವು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260807-25-933652324

