ಆಲೂರು: ದೇಶದ ಭವಿಷ್ಯ ಅಡಗಿರುವುದು ಸರ್ಕಾರಿ ಶಾಲೆಗಳಲ್ಲಿ ಎಂದು ಹಾಸನ ಅನನ್ಯ ಟ್ರಸ್ಟ್ ಅಧ್ಯಕ್ಷೆ ಕೆ.ಟಿ. ಜಯಶ್ರೀ ತಿಳಿಸಿದರು.
ಪಾಳ್ಯ ಹೋಬಳಿ ತಾಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅನನ್ಯ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ಉಚಿತ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಎಂ. ವರದರಾಜು ಮಾತನಾಡಿ, ಹಿಂದಿನ ಕಾಲದಲ್ಲಿ ಸೌಲಭ್ಯಗಳ ಕೊರತೆಯಿಂದ ಶೈಕ್ಷಣಿಕ ಸ್ಥಿತಿಗತಿ ಕುಂಠಿತವಾಗಿರುತಿತ್ತು, ಆದರೆ ವರ್ತಮಾನದಲ್ಲಿ ಸರ್ಕಾರದಿಂದ ಪಠ್ಯಪುಸ್ತಕ, ಶೂ-ಸಾಕ್ಸ್, ಕ್ಷೀರಭಾಗ್ಯ, ಸಮವಸ್ತ್ರ, ಬಿಸಿಯೂಟ, ವಿದ್ಯಾರ್ಥಿವೇತನ ಸೇರಿದಂತೆ ಹಲವಾರು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಕೆಲವು ಪೋಷಕರಿಗೆ ಸಮಯಕ್ಕೆ ಸರಿಯಾಗಿ ನೋಟ್‍ಬುಕ್ ಕೊಡಿಸುವುದು ಕಷ್ಟವಾಗುತ್ತಿರುವುದರಿಂದ, ಕೆಲವು ದಾನಿಗಳನ್ನು ಸಂಪರ್ಕಿಸಿ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ಒದಗಿಸಿಕೊಡುತ್ತಿದ್ದೇವೆ. ಮಕ್ಕಳು ಸದ್ಬಳಕೆ ಮಾಡಿಕೊಳ್ಳುವುದರ ಮೂಲಕ ಜ್ಞಾನಾರ್ಜನೆ ಮಾಡಬೇಕು ಎಂದು ಹೇಳಿದರು.
ಶಾಲಾ ಮುಖ್ಯ ಶಿಕ್ಷಕ ಕೊಟ್ರೇಶ್ ಎಸ್. ಉಪ್ಪಾರ್, ಶಿಕ್ಷಕಿ ವಿ.ರವಿತ, ಅನನ್ಯ ಟ್ರಸ್ಟ್ ಸದಸ್ಯರಾದ ನಿವೃತ್ತ ಶಿಕ್ಷಕಿ ಪಾರ್ವತಮ್ಮ, ಪಂಕಜ ಉಪಸ್ಥಿತರಿದ್ದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260623-36-1087829955

