Dailyhunt
ಸೆ. 28ರಂದು PSI 402 ಹುದ್ದೆಗಳ ನೇಮಕಾತಿ ಪರೀಕ್ಷೆ: ಜಿ. ಪರಮೇಶ್ವರ

ಸೆ. 28ರಂದು PSI 402 ಹುದ್ದೆಗಳ ನೇಮಕಾತಿ ಪರೀಕ್ಷೆ: ಜಿ. ಪರಮೇಶ್ವರ

ಬೆಂಗಳೂರು: 'ಪಿಎಸ್‌ಐ 402 ಹುದ್ದೆಗಳ ನೇಮಕಾತಿ ಪರೀಕ್ಷೆ ಸೆ. 22ರ ಬದಲು ಸೆ. 28ರಂದು ಶನಿವಾರ ನಡೆಸಲು ತೀರ್ಮಾನಿಸಲಾಗಿದೆ' ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ರಾಜ್ಯದ ನೂರಕ್ಕೂ ಹೆಚ್ಚು ಆಕಾಂಕ್ಷಿಗಳು ಯುಪಿಎಸ್‌ಸಿ ಪ್ರಿಲಿಮ್ಸ್ ಪರೀಕ್ಷೆ ಬರೆದು, ಮುಖ್ಯ ಪರೀಕ್ಷೆಗೆ ಅರ್ಹತೆ ಹೊಂದಿದ್ದಾರೆ, ಮುಖ್ಯ ಪರೀಕ್ಷೆಗೆ ಮತ್ತು ಪಿಎಸ್‌ಐ ಪರೀಕ್ಷೆ ಸೆ.

22ರಂದು ನಿಗದಿಯಾಗಿರುವುದರಿಂದ ಯಾವುದಾದರೂ ಒಂದು ಪರೀಕ್ಷೆ ಅವಕಾಶ ಕೈತಪ್ಪುತ್ತದೆ. ಪಿಎಸ್‌ಐ ಪರೀಕ್ಷೆ ಮುಂದೂಡುವಂತೆ ಆಕಾಂಕ್ಷಿಗಳು ಮನವಿ ಸಲ್ಲಿಸಿದ್ದರು. ಬಿಜೆಪಿಯ ನಿಯೋಗವು ಮನವಿ ಸಲ್ಲಿಸಿತ್ತು' ಎಂದರು.

ಕೆಇಎ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಡಿಸೆಂಬರ್‌ವರೆಗೆ ಪರೀಕ್ಷೆ ನಡೆಸಲು ಭಾನುವಾರ ದಿನ ಖಾಲಿ ಇಲ್ಲ ಎಂದು ತಿಳಿಸಿದ್ದರು. ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಮಾತನಾಡಿ, ಶನಿವಾರದಂದು ಒಂದು ದಿನ ಪರೀಕ್ಷೆ ನಡೆಸಲು ಅವಕಾಶ ಮಾಡಿಕೊಡುವಂತೆ ಮನವಿ‌ ಮಾಡಿದ್ದೆ. ಎಲ್ಲ ಆಕಾಂಕ್ಷಿಗಳ ಮನವಿಗೆ ಮನ್ನಣೆ ಕೊಟ್ಟು, ಅನುಕೂಲವಾಗುವ ನಿಟ್ಟಿನಲ್ಲಿ ಸೆ. 28ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.

PSI Death | ಮುಂದುವರಿದ ತನಿಖೆ, ಮಹತ್ವದ ‌ಮಾಹಿತಿ‌ ಪಡೆದ ಸಿಐಡಿಪಿಎಸ್‌ಐ ನೇಮಕಾತಿ: ವಿಮಾನನಿಲ್ದಾಣ ಮಾದರಿ ತಪಾಸಣೆ
Dailyhunt
Disclaimer: This content has not been generated, created or edited by Dailyhunt. Publisher: Prajavani