Dailyhunt Logo
  • Light mode
    Follow system
    Dark mode
    • Play Story
    • App Story
ಶಾಲೆಯಲ್ಲಿ ಗುಂಡಿನ ದಾಳಿ: ಐವರು ಸಾವು

ಶಾಲೆಯಲ್ಲಿ ಗುಂಡಿನ ದಾಳಿ: ಐವರು ಸಾವು

ನೊಂತಬುರಿ (ಥಾಯ್ಲೆಂಡ್‌): ವಿದ್ಯಾರ್ಥಿಯೊಬ್ಬ ಶಾಲಾ ಆವರಣದಲ್ಲಿ ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ ಐವರು ಮೃತಪಟ್ಟಿದ್ದು, ಅನೇಕರಿಗೆ ಗಾಯಗಳಾಗಿರುವ ಘಟನೆ ಬ್ಯಾಂಕಾಕ್‌ನ ನೊಂತಬುರಿ ಪ್ರಾಂತ್ಯದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

ದಾಳಿಯ ಬಳಿಕ ವಿದ್ಯಾರ್ಥಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ದಾಳಿಯಲ್ಲಿ ಶಿಕ್ಷಕರು, ಆಡಳಿತಾಧಿಕಾರಿಗಳು ಸೇರಿದಂತೆ ಐವರು ಶಾಲಾ ಸಿಬ್ಬಂದಿ ಮೃತಪಟ್ಟಿದ್ದು, 23 ಜನರಿಗೆ ಗಾಯಗಳಾಗಿವೆ ಮತ್ತು 10 ಜನರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ದಾಳಿಗೂ ಸ್ವಲ್ಪ ಸಮಯದ ಮುನ್ನ ಮನೆಯಲ್ಲಿದ್ದ ತನ್ನ ಅಜ್ಜ-ಅಜ್ಜಿಯನ್ನೂ ಆತ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಪ್ರಧಾನಿ ಅನುಟಿನ್ ಚಾರ್ನ್‌ವಿರಾಕುಲ್‌ ಅವರು, 'ಕಾನೂನು ಸಂಘರ್ಷಕ್ಕೆ ಒಳಗಾದ 14 ವರ್ಷದ ವಿದ್ಯಾರ್ಥಿ, ಅಜ್ಜ-ಅಜ್ಜಿಯೊಂದಿಗೆ ವಾಸವಾಗಿದ್ದ. ಶಾಲೆಗೆ ಸಂಬಂಧಿಸಿದ ವಿಷಯದಲ್ಲಿ ಒತ್ತಡಕ್ಕೆ ಒಳಗಾಗಿದ್ದ. ದಾಳಿಗೆ ಬಳಸಿದ ಬಂದೂಕಿಗೆ ಆತನ ಅಜ್ಜನ ಹೆಸರಿನಲ್ಲಿ ಪರವಾನಗಿ ನೀಡಲಾಗಿತ್ತು' ಎಂದು ಅವರು ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Prajavani