Dailyhunt Logo
  • Light mode
    Follow system
    Dark mode
    • Play Story
    • App Story
ಶಾಸಕ ಮನಗೂಳಿ ನಿಧನಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಸಂತಾಪ

ಶಾಸಕ ಮನಗೂಳಿ ನಿಧನಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಸಂತಾಪ

ವಿಜಯಪುರ: ಸಿಂದಗಿ ಶಾಸಕ ಎಂ.ಸಿ.ಮನಗೂಳಿ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜಿಲ್ಲೆ ಸಂತಾಪ ವ್ಯಕ್ತಪಡಿಸಿದ್ದಾರೆ.

'ಮನಗೂಳಿ ಅವರು ರಾಜ್ಯ ಕಂಡ ಶ್ರೇಷ್ಠ ರಾಜಕೀಯ ಮುತ್ಸದ್ದಿ, ಅಜಾತಶತ್ರುವಾಗಿದ್ದರು' ಎಂದಿದ್ದಾರೆ.

'ರಾಜಕೀಯ ಧ್ರುವ ತಾರೆಯೊಂದು ಅಸ್ತಂಗತವಾಗಿದ್ದು, ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ' ಎಂದು ಪ್ರಾರ್ಥಿಸಿದ್ದಾರೆ.

'ಸರಳ ವ್ಯಕ್ತಿತ್ವಕ್ಕೆ ಹೆಸರಾಗಿದ್ದ ಅವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನಷ್ಠವಾಗಿದೆ' ಎಂದು ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Prajavani