Dailyhunt Logo
  • Light mode
    Follow system
    Dark mode
    • Play Story
    • App Story
ಶಾಸಕ ಪ್ರಭು ಚವಾಣ್‌ರಿಂದ ತಾಂಡಾದಲ್ಲಿ ಗ್ರಾಮ ವಾಸ್ತವ್ಯ

ಶಾಸಕ ಪ್ರಭು ಚವಾಣ್‌ರಿಂದ ತಾಂಡಾದಲ್ಲಿ ಗ್ರಾಮ ವಾಸ್ತವ್ಯ

ರಾದ್: ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ತಾಲ್ಲೂಕಿನ ಬೋಂತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮನಾಯಕ್‌ ತಾಂಡಾದಲ್ಲಿ ಶಾಸಕ ಪ್ರಭು ಚವಾಣ್ ಅವರು ಶನಿವಾರ ರಾತ್ರಿ ಗ್ರಾಮ ವಾಸ್ತವ್ಯ ನಡೆಸಿದರು.

ತಾಂಡಾಕ್ಕೆ ಆಗಮಿಸಿದ ಶಾಸಕರು ನಿವಾಸಿಗಳೊಂದಿಗೆ ಸಂವಾದ ನಡೆಸಿ, ಕುಡಿಯುವ ನೀರು, ರಸ್ತೆ, ಶಿಕ್ಷಣ, ಅಂಗನವಾಡಿ, ಆರೋಗ್ಯ ಸೇರಿದಂತೆ ವಿವಿಧ ಮೂಲಸೌಕರ್ಯಗಳ ಕುರಿತು ಮಾಹಿತಿ ಪಡೆದುಕೊಂಡರು.

ಗ್ರಾಮಸ್ಥರು ತಮ್ಮ ಸಮಸ್ಯೆಗಳು ಹಾಗೂ ಅಭಿವೃದ್ಧಿ ಸಂಬಂಧಪಟ್ಟ ಬೇಡಿಕೆಗಳನ್ನು ಶಾಸಕರ ಮುಂದೆ ಮಂಡಿಸಿದರು.

ತಾಂಡಾದಲ್ಲಿ ಸ್ಮಶಾನ ಭೂಮಿ ಸಮಸ್ಯೆ ಕುರಿತು ಗ್ರಾಮಸ್ಥರು ಗಮನ ಸೆಳೆದ ಸಂದರ್ಭದಲ್ಲಿ, 'ಅಗತ್ಯ ಜಮೀನು ಮಂಜೂರಾತಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು' ಎಂದು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

ರಾಮನಾಯಕ್‌ ತಾಂಡಾವನ್ನು ಕಂದಾಯ ಗ್ರಾಮವನ್ನಾಗಿ ಘೋಷಿಸುವಂತೆ ಗ್ರಾಮಸ್ಥರು ಮನವಿ ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಶಾಸಕರು, 'ಕ್ಷೇತ್ರದ ವಿವಿಧ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ತಾಂಡಾದಲ್ಲಿ ಈಗಾಗಲೇ ರಸ್ತೆ, ಕುಡಿಯುವ ನೀರು, ಶಾಲೆ, ಅಂಗನವಾಡಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳು ಕೈಗೊಳ್ಳಲಾಗಿದೆ' ಎಂದು ತಿಳಿಸಿದರು.

ತಹಶೀಲ್ದಾರ್ ಮಹೇಶ ಪಾಟೀಲ, ತಾ.ಪಂ ಇಒ ಕಿರಣ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260623-33-1338804542

Dailyhunt
Disclaimer: This content has not been generated, created or edited by Dailyhunt. Publisher: Prajavani