ಹಿರೇಕೆರೂರ: 'ಗ್ರಾಮೀಣ ಪ್ರದೇಶದ ಕೆರೆಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ನೀರಿನ ಸಂರಕ್ಷಣೆ, ಕೃಷಿ ಚಟುವಟಿಕೆಳಿಗೆ ಮತ್ತು ಅಂತರ್ಜಲದ ನೀರಿನ ಮಟ್ಟ ಹೆಚ್ಚಿಸಲು ಸಹಾಯಕವಾಗಲಿದೆ' ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ತಾಲ್ಲೂಕಿನ ಚಿಕ್ಕೇರೂರ ಗ್ರಾಮದ ಯಲ್ಲಾಪುರದಲ್ಲಿ ₹50 ಲಕ್ಷ ವೆಚ್ಚದ ಶಟ್ಟಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಈಚೆಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
'ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ತಂದು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಜನರ ವಿಶ್ವಾಸಕ್ಕೆ ತಕ್ಕಂತೆ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸರ್ಕಾರದೊಂದಿಗೆ ನಿರಂತರ ಕೆಲಸ ಮಾಡತ್ತೇನೆ' ಎಂದು ಹೇಳಿದರು.
ಚಿಕ್ಕೇರೂರ ಹಾಗೂ ಅಗಡಿ ಮಠದ ಗುರುಲಿಂಗ ಸ್ವಾಮಿಗಳು, ಹನುಮಗೌಡ ಕೌಲಿ, ತಾಲ್ಲೂಕಿನ ಗ್ಯಾರಂಟಿ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಬುರಡಿಕಟ್ಟಿ, ಶಿವರಾಜ ಹರಿಜನ, ಬಸಣ್ಣ ಕೋರಿಶೆಟ್ರ, ಪ್ರಭು ಮಳವಳ್ಳಿ ಇದ್ದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260706-22-1612104710

