Dailyhunt Logo
  • Light mode
    Follow system
    Dark mode
    • Play Story
    • App Story
ಶಿಡ್ಲಘಟ್ಟದಲ್ಲಿ ಲಂಚ ಸ್ವೀಕರಿಸಿದ ಇಬ್ಬರು ಲೋಕಾಯುಕ್ತ ಕಸ್ಟಡಿಗೆ

ಶಿಡ್ಲಘಟ್ಟದಲ್ಲಿ ಲಂಚ ಸ್ವೀಕರಿಸಿದ ಇಬ್ಬರು ಲೋಕಾಯುಕ್ತ ಕಸ್ಟಡಿಗೆ

ಶಿಡ್ಲಘಟ್ಟ: ಪವತಿ ಖಾತೆ ಮಾಡಿಕೊಡಲು ₹70 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರಿಂದ ಬಂಧಿತರಾಗಿರುವ ನಗರಸಭೆ ದ್ವಿತೀಯ ದರ್ಜೆ ಸಹಾಯಕ ನಾಗರಾಜ್ ಹಾಗೂ ನಗರಸಭೆ ಮಾಜಿ ಸದಸ್ಯ ಮೌಲಾ ಅವರನ್ನು ನ್ಯಾಯಾಲಯ ಎರಡು ದಿನ ಲೋಕಾಯುಕ್ತ ಪೊಲೀಸರ ವಶಕ್ಕೆ ಒಪ್ಪಿಸಿದೆ.

ಪವತಿ ಖಾತೆ ಮಾಡಿಕೊಡಲು ಅರ್ಜಿ ಸಲ್ಲಿಸಿದ್ದ ನಜೀಮಾ ಅವರಿಂದ ಲಂಚದ ಹಣ ಪಡೆಯುವ ಸಂದರ್ಭದಲ್ಲಿ ಸೋಮವಾರ ನಗರಸಭೆ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದರು.

ಆರೋಪಿಗಳು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ನೀಡುವಂತೆ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ನಾಗರಾಜ್ ಅವರಿಗೆ ಫೋನ್‌ ಪೇ ಮೂಲಕ ₹20 ಸಾವಿರ ಪಾವತಿಸಲಾಗಿತ್ತು. ಉಳಿದ ₹25 ಸಾವಿರ ಸಂಜೆ 4 ಗಂಟೆ ಸುಮಾರಿಗೆ ನಗರಸಭೆ ಕಚೇರಿ ಸಭಾಂಗಣದಲ್ಲಿ ನೀಡುವ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಹಣದ ಸಮೇತ ಇಬ್ಬರನ್ನು ವಶಕ್ಕೆ ಪಡೆದಿದ್ದರು.

ಲೋಕಾಯುಕ್ತ ಪೊಲೀಸ್ ಎಸ್.ಪಿ ಶಿವಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

261104-16-1463362382

Dailyhunt
Disclaimer: This content has not been generated, created or edited by Dailyhunt. Publisher: Prajavani