ಶಿರಾ: ಸರ್ಕಾರಿ ಶಾಲೆಗಳು ಮುಚ್ಚಿದರೆ ಬಡವರ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ. ಆದ್ದರಿಂದ ಸರ್ಕಾರಿ ಶಿಕ್ಷಕರು, ಅಧಿಕಾರಿಗಳು, ರಾಜಕಾರಣಿಗಳು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸುವ ಕೆಲಸ ಮಾಡಬೇಕು ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
ತಾಲ್ಲೂಕಿನ ತರೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಅವರ ಸ್ಥಳೀಯ ಪ್ರದೇಶಾಭಿವೃದ್ಧಿ ಹಾಗೂ ಸ್ವಂತ ನಿಧಿಯಿಂದ ನಿರ್ಮಿಸಿರುವ ನೂತನ ಹೈ-ಟೆಕ್ ಸರ್ಕಾರಿ ಶಾಲಾ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.
ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಕಾರದ ವೀರಬಸವ ಸ್ವಾಮೀಜಿ ಮಾತನಾಡಿದರು.
ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಾಧವ ರೆಡ್ಡಿ, ತಹಶೀಲ್ದಾರ್ ಆನಂದ್ ಕುಮಾರ್, ತಾ.ಪಂ ಇಒ ಹರೀಶ್, ಕ್ಷೇತ್ರಶಿಕ್ಷಣಾಧಿಕಾರಿ ಎನ್.ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಗುಳಿಗೇನಹಳ್ಳಿ ನಾಗರಾಜು, ತುಮುಲ್ ನಿರ್ದೇಶಕ ಎಸ್.ಆರ್.ಗೌಡ, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಚಂಗಾವರ ಮಾರಣ್ಣ, ಜಿ.ಪಂ ಮಾಜಿ ಉಪಾಧ್ಯಕ್ಷ ಮುಡಿಮಡು ರಂಗಶ್ವಾಮಯ್ಯ, ಬರಗೂರು ಶಿವಕುಮಾರ್, ಉದಯಶಂಕರ್, ರಂಗನಾಥಗೌಡ, ಕೃಷಿ ಸಹಾಯಕ ನಿರ್ದೇಶಕ ನಾಗರಾಜು, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶಶಿಧರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾಗರಾಜು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹನುಮಂತರಾಜು, ಮುಖ್ಯ ಶಿಕ್ಷಕಿ ಶೈಲಜಾ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರವೀಣ್, ಉಪಾಧ್ಯಕ್ಷೆ ರಮ್ಯ, ಈರಣ್ಣ ಪಟೇಲ್, ಚಿಕ್ಕಣ್ಣ ಉಪಸ್ಥಿತರಿದ್ದರು.
261104-17-1121614066

