Dailyhunt Logo
  • Light mode
    Follow system
    Dark mode
    • Play Story
    • App Story
ಶ್ರೀನಿವಾಸಪುರ ಕೂಸಂದ್ರ ಕ್ರಾಸ್ ತಿರುವಿನಲ್ಲಿ ಖಾಸಗಿ ಬಸ್-ಕಾರು ಮುಖಾಮುಖಿ

ಶ್ರೀನಿವಾಸಪುರ ಕೂಸಂದ್ರ ಕ್ರಾಸ್ ತಿರುವಿನಲ್ಲಿ ಖಾಸಗಿ ಬಸ್-ಕಾರು ಮುಖಾಮುಖಿ

ಶ್ರೀನಿವಾಸಪುರ: ತಾಲ್ಲೂಕಿನ ಕೂಸಂದ್ರ ಕ್ರಾಸ್‌ ತಿರುವಿನಲ್ಲಿ ಖಾಸಗಿ ಬಸ್ ಹಾಗೂ ಕಾರು ಡಿಕ್ಕಿಯಾಗಿ, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಮಂಗಳವಾರ ಬೆಂಗಳೂರು ಕಡೆಯಿಂದ ಮದನಪಲ್ಲಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಮದನಪಲ್ಲಿಯಿಂದ ಬೆಂಗಳೂರಿನತ್ತ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿಯಾಗಿದೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿವೆ. ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಕಾರಿನಲ್ಲಿದ್ದ ಕುಟುಂಬದ ಸದಸ್ಯರು ಸಣ್ಣಪುಟ್ಟ ಗಾಯಗಳಾಗಿವೆ.

ವಿಷಯ ತಿಳಿಯುತ್ತಿದ್ದಂತೆ ಗೌನಿಪಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೂಸಂದ್ರ ಕ್ರಾಸ್‌ ತಿರುವಿನಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ಸುರಕ್ಷತಾ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

261104-18-1176338588

Dailyhunt
Disclaimer: This content has not been generated, created or edited by Dailyhunt. Publisher: Prajavani