ಶ್ರೀನಿವಾಸಪುರ: ಗ್ರಾಮ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.
ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಕೆ. ಸರ್ವೇಶ್, 'ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮವು ಜೂನ್ 30ರಿಂದ ಜುಲೈ 29ರ ವರೆಗೆ ನಡೆಯಲಿದೆ.
ಬಿಎಲ್‌ಒಗಳು ಗಣತಿ ನಮೂನೆಯೊಂದಿಗೆ ಮತದಾರರ ಮನೆಗೆ ಭೇಟಿ ನೀಡಿ ದಾಖಲಾತಿ ಪರಿಶೀಲಿಸಲಿದ್ದಾರೆ' ಎಂದರು.
ಮತಪಟ್ಟಿಯಲ್ಲಿ ಮತದಾರರು ಹೊಸದಾಗಿ ಹೆಸರು ಸೇರಿಸಲು, ತೆಗೆಸಲು ಮತ್ತು ತಿದ್ದುಪಡಿ ಮಾಡಲು ಎಸ್‌ಐಆರ್ ಕೈಗೊಳ್ಳಲಾಗಿದೆ. 18 ವರ್ಷ ತುಂಬಿದವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಬಹುದು. ಇದಕ್ಕೆ ತಮ್ಮ ಕುಟುಂಬದ ಹಿರಿಯ ಸದಸ್ಯರೊಬ್ಬರ ಮತದಾರರ ಚೀಟಿ ಸಂಖ್ಯೆ ಸೇರಿ ಇನ್ನಿತರ ದಾಖಲೆ ಸಲ್ಲಿಸಬೇಕು ಎಂದರು.
ತಾಲ್ಲೂಕು ಪಂಚಾಯಿತಿ ಸಿಬ್ಬಂದಿ, ಗಣಕಯಂತ್ರ ನಿರ್ವಾಹಕ ಶ್ರೀನಾಥ್, ಸುದರ್ಶನ್, ಪುರಸಭೆ ಮುಖ್ಯ ಅಧಿಕಾರಿ ವಿ. ನಾಗರಾಜು, ಗ್ರಾಮ ಪಂಚಾಯಿತಿ ಅಧಿಕಾರಿಗಳು, ಬಿಎಲ್‌ಒಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260705-18-324394983

