Dailyhunt Logo
  • Light mode
    Follow system
    Dark mode
    • Play Story
    • App Story
ದೆಹಲಿ ಪೊಲೀಸರ ಭದ್ರಕೋಟೆಗೆ ಲಗ್ಗೆ ಇಟ್ಟ ಸಿಜೆಪಿ ವ್ಯಾಪಕ ಪ್ರತಿಭಟನೆ

ದೆಹಲಿ ಪೊಲೀಸರ ಭದ್ರಕೋಟೆಗೆ ಲಗ್ಗೆ ಇಟ್ಟ ಸಿಜೆಪಿ ವ್ಯಾಪಕ ಪ್ರತಿಭಟನೆ

ದೇಶದಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಭಾರಿ ಅಕ್ರಮಗಳು ನಡೆದಿವೆ ಎಂದು ಆರೋಪಿಸುತ್ತಿರುವ ಕಾಕ್ರೋಚ್‌ ಜನತಾ ಪಕ್ಷ (ಸಿಜೆಪಿ) ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರ ರಾಜೀನಾಮೆಗೆ ಪಟ್ಟು ಹಿಡಿದಿದೆ.

ಈ ಹಿನ್ನೆಲೆಯಲ್ಲಿ ಇಂದು ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಿದೆ. ಅದನ್ನು ಹತ್ತಿಕ್ಕಲು ರಾಷ್ಟ್ರ ರಾಜಧಾನಿಯಾದ್ಯಂತ ಪೊಲೀಸ್‌ ಸರ್ಪಗಾವಲು ಹಾಕಲಾಗಿದೆ. ದೆಹಲಿ ಸಂಪರ್ಕಿಸುವ ಅಂತರರಾಜ್ಯ ಗಡಿಗಳಲ್ಲಿ ಗಡಿ ಭದ್ರತಾ ಪಡೆ ನಿಯೋಜಿಸಿದ್ದರೆ, ಮೆಟ್ರೊ ರೈಲು, ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಇಂಟರ್‌ನೆಟ್‌ ಸೇವೆಯನ್ನೂ ಸ್ಥಗಿತಗೊಳಿಸಿದ್ದು, ದೆಹಲಿ ಸಂಪೂರ್ಣವಾಗಿ ಪೊಲೀಸರ 'ಹಿಡಿತ'ದಲ್ಲಿದೆ.

ಭದ್ರತೆಗೆ 20 ಸಾವಿರ ಸಿಬ್ಬಂದಿ

ಸಿಇಸಿ ಜ್ಞಾನೇಶ್‌ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಭಾರಿ ಪ್ರತಿಭಟನೆ ನಡೆಸಲು ಸಿಜೆಪಿ ಹಾಗೂ ವಿವಿಧ ವಿದ್ಯಾರ್ಥಿ ಸಂಘಟನೆಗಳು ಸಜ್ಜುಗೊಂಡಿರುವ ಬೆನ್ನಲ್ಲೇ, ಭದ್ರತೆಗಾಗಿ 20 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ನಿಯೋಜಿಸಲಾಗಿದೆ.

ನಾಳೆ ಸಿಜೆಪಿ ಪ್ರತಿಭಟನೆ: ಭದ್ರತೆಗೆ 20 ಸಾವಿರ ಸಿಬ್ಬಂದಿ

ಜಂತರ್ ಮಂತರ್‌ನಲ್ಲಿ ನಿಷೇಧಾಜ್ಞೆ

ಸಿಜೆಪಿ ಪ್ರತಿಭಟನೆಗೆ ದೆಹಲಿ ಪೊಲೀಸರು ಶುಕ್ರವಾರ ಅನುಮತಿ ನಿರಾಕರಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ನವದೆಹಲಿಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮೆಟ್ರೊ ಬಂದ್: ಸುಪ್ರೀಂ ಕೋರ್ಟ್ ಕಳವಳ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಇತರೆ ಸಂಘಟನೆಗಳು ಕರೆಕೊಟ್ಟಿರುವ ಪ್ರತಿಭಟನೆ ನಿಯಂತ್ರಣಕ್ಕೆ ದೆಹಲಿಯ 57 ಮೆಟ್ರೊ ನಿಲ್ದಾಣಗಳನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮದ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ.

ರಾತ್ರೋರಾತ್ರಿ ಹಲವರು ಪೊಲೀಸ್ ವಶಕ್ಕೆ

ನವದೆಹಲಿ: ಕಾಕ್ರೋಚ್‌ ಜನತಾ ಪಕ್ಷವು (ಸಿಜೆಪಿ) ಜಂತರ್‌ ಮಂತರ್‌ನಲ್ಲಿ ಇಂದು ಬೃಹತ್‌ ಪ್ರತಿಭಟನೆಗೆ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಷ್ಟ್ರ ರಾಜಧಾನಿಯಾದ್ಯಂತ ಅಪರಾಧ ಪ್ರಕರಣಗಳ ಹಿನ್ನೆಲೆಯುಳ್ಳ ಹಲವರನ್ನು ವಶಕ್ಕೆ ಪಡೆದಿರುವುದಾಗಿ ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದ್ದು, 15 ಜಿಲ್ಲೆಗಳಾದ್ಯಂತ ಅಪರಾಧ ಹಿನ್ನೆಲೆ ಇರುವ ಸುಮಾರು 30-40 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಹೇಳಿವೆ.

ಸಂಸತ್‌ ಭವನ ರಸ್ತೆಯಲ್ಲಿ ಪೊಲೀಸ್ ಬಿಗಿ ಭದ್ರತೆ

ದೆಹಲಿ-ಹರಿಯಾಣದ ಸಿಂಘು ಗಡಿಯಲ್ಲಿ ಭದ್ರತೆ

ಪ್ರತಿಭಟನಾ ಸ್ಥಳಕ್ಕೆ ಬಂದ 500 ಮಂದಿ ಪೊಲೀಸ್ ವಶಕ್ಕೆ

ಹಲವು ಗುಂಪುಗಳಾಗಿ ಬಂದ ಸುಮಾರು 500 ಜನರನ್ನು ವಿವಿಧೆಡೆ ವಶಕ್ಕೆ ಪಡೆಯಲಾಗಿದೆ. ಅದರಲ್ಲಿ ಸುಮಾರು 50 ಮಂದಿ ಅಪರಾಧದ ಹಿನ್ನೆಲೆ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನೆಗೂ ಮೊದಲೇ ಸೋಲೊಪ್ಪಿಕೊಂಡ ಮೋದಿ: ದೀಪ್ಕೆ

ಪ್ರಧಾನಿ ನರೇಂದ್ರ ಮೋದಿ ಅವರು ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ಆರಂಭವಾಗುವ ಮೊದಲೇ ಸೋಲೊಪ್ಪಿಕೊಂಡಿದ್ದಾರೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ನಾಯಕ ಅಭಿಜಿತ್‌ ದೀಪ್ಕೆ ಹೇಳಿದ್ದಾರೆ.

ಮುಂಬೈನಿಂದ ದೆಹಲಿಗೆ ಹೊರಡುವ ಮುನ್ನ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ದೀಪ್ಕೆ, 'ಪ್ರತಿಭಟನೆ ಆರಂಭವಾಗುವ ಮೊದಲೇ ಮೋದಿ ಸೋಲೊಪ್ಪಿಕೊಂಡಿದ್ದಾರೆ. ದೆಹಲಿಯನ್ನು ಬಂದ್‌ ಮಾಡುವುದು, ಕಾರ್ಯಕರ್ತರ ಮೇಲೆ ದಮನಕಾರಿ ಕ್ರಮ ಕೈಗೊಳ್ಳುವುದು 'ತಾಕತ್ತಿನ ಸಂಕೇತ'ವಲ್ಲ; ತನ್ನದೇ ಜನರ ಬಗ್ಗೆ ಭಯಭೀತರಾಗಿರುವ ನಾಯಕನ ಲಕ್ಷಣ' ಎಂದು ಬರೆದಿದ್ದಾರೆ.

ದೆಹಲಿ ಬಸ್‌ಗಳಲ್ಲಿ ಪೊಲೀಸ್‌ ತಪಾಸಣೆ

ಮನೆಯಲ್ಲೇ ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸರ ವಶಕ್ಕೆ

ಯೂಟ್ಯೂಬರ್ ಧ್ರುವ್ ರಾಠಿ ಅವರನ್ನು ಪೊಲೀಸರು ಹರಿಯಾಣದ ಗುರುಗ್ರಾಮದಲ್ಲಿರುವ ಅವರ ನಿವಾಸದಿಂದ ಶನಿವಾರ ಬೆಳಿಗ್ಗೆ ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಳಿಗ್ಗೆ 8 ಗಂಟೆ ಸುಮಾರಿಗೆ ಗುರುಗ್ರಾಮದ ಸೆಕ್ಟರ್ 56ನಲ್ಲಿರುವ ಮನೆಗೆ ತೆರಳಿದ 50ಕ್ಕೂ ಹೆಚ್ಚು ಪೊಲೀಸರು ಧ್ರುವ್ ರಾಠಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ಸಿಜೆಪಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್‌ ತಲೆದಂಡಕ್ಕೆ ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಿದ್ದ ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ನಾಯಕರಾದ ಅಭಿಜಿತ್‌ ದೀಪ್ಕೆ, ಸೌರವ್‌ ದಾಸ್‌ ಮತ್ತು ಅಶುತೋಶ್‌ ರಾಂಕಾ ಅವರನ್ನು ದೆಹಲಿ ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ.

ಈ ಮೂವರು ದೆಹಲಿಗೆ ವಿಮಾನದಲ್ಲಿ ಬಂದಿಳಿಯುತ್ತಿದ್ದಂತೆ ವಶಕ್ಕೆ ಪಡೆಯಲಾಗಿದೆ ಎಂದು ಸಿಜೆಪಿ ತಿಳಿಸಿದೆ.

ದೆಹಲಿ ಪೊಲೀಸರ ಕ್ರಮವನ್ನು ಖಂಡಿಸಿ ಹೇಳಿಕೆ ಬಿಡುಗಡೆ ಮಾಡಿರುವ ಸಿಜೆಪಿ, ಪ್ರತಿಭಟನಾ ಸ್ಥಳಕ್ಕೆ ತಲುಪುವುದನ್ನು ತಡೆಯುವ ಸಲುವಾಗಿ ಪೂರ್ವಯೋಜಿತ ಕ್ರಮದ ಭಾಗವಾಗಿ ನಾಯಕರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದೆ.

ಸೌರವ್‌ ದಾಸ್‌, ಅಭಿಜಿತ್‌ ದೀಪ್ಕೆ ಮತ್ತು ಅಶುತೋಶ್‌ ರಾಂಕಾ

ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುತ್ತಿರುವ ದೆಹಲಿ ಪೊಲೀಸರು

ಅಧಿಕಾರಿಗಳ ವಿರುದ್ಧ SC ಆದೇಶ ಉಲ್ಲಂಘನೆ ಆರೋಪ

ದೆಹಲಿಯಲ್ಲಿ ಮೆಟ್ರೊ ಮತ್ತು ರೈಲು ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಬಾರದು ಎಂಬ ಸುಪ್ರೀಂ ಕೋರ್ಟ್‌ ನಿರ್ದೇಶನವನ್ನು ಅಧಿಕಾರಿಗಳು ಉಲ್ಲಂಘಿಸಿದ್ದು, ಕ್ರಮ ತೆಗೆದುಕೊಳ್ಳುವಂತೆ ಕೋರಿ ಶನಿವಾರ ಅರ್ಜಿ ಸಲ್ಲಿಸಲಾಗಿದೆ.

ಶೈಲೇಂದ್ರ ಮಣಿ ತ್ರಿಪಾಠಿ ಸಲ್ಲಿಸಿರುವ ಅರ್ಜಿಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಮತ್ತು ಇತರರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ದೇಶ ಅಸ್ಥಿರಗೊಳಿಸಲು ಸಂಚು; ರಾಹುಲ್, ಸಿಜೆಪಿ ವಿರುದ್ಧ ಬಿಜೆಪಿ ವಾಗ್ದಾಳಿ

ರಾಹುಲ್ ಗಾಂಧಿ ನೇತೃತ್ವದ ಇಂಡಿಯಾ ಮೈತ್ರಿಕೂಟ ಗುಂಪು ಹಾಗೂ ಅರವಿಂದ್ ಕೇಜ್ರಿವಾಲ್ ಬೆಂಬಲಿತ ಸಿಜಿಪಿ ಗುಂಪು ದೇಶದಲ್ಲಿ ಅಪಾಯಕಾರಿ ಹಾಗೂ ಗಂಭೀರ ಪರಿಸ್ಥಿತಿಯನ್ನು ನಿರ್ಮಿಸಲು ಯತ್ನಿಸುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

140 ಕೋಟಿ ಜನರು ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕುತ್ತ, ಭಾರತದ ಅಭಿವೃದ್ಧಿಗೆ ಒಟ್ಟಾಗಿ ಶ್ರಮಿಸುತ್ತಿರುವ ಈ ಸಂದರ್ಭದಲ್ಲಿ ದೇಶವನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ.

ಪ್ರತಿಭಟನಾಕಾರರು ವಶಕ್ಕೆ

ತುರ್ತು ಪರಿಸ್ಥಿತಿಗಿಂತಲೂ ಕೆಟ್ಟದಾಗಿದೆ: ಕೇಜ್ರಿವಾಲ್

ಸಿಜೆಪಿ ನಾಯಕರಾದ ಅಭಿಜಿತ್‌ ದೀಪ್ಕೆ, ಸೌರವ್‌ ದಾಸ್‌ ಮತ್ತು ಅಶುತೋಶ್‌ ರಾಂಕಾ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರ ಕ್ರಮವನ್ನು ಆಮ್‌ ಆದ್ಮಿ ಪಕ್ಷದ ಸಂಚಾಲಕ ಅರವಿಂದ ಕೇಜ್ರಿವಾಲ್ ಖಂಡಿಸಿದ್ದಾರೆ.

'ವಿಮಾನದಿಂದ ಇಳಿಯುತ್ತಿದ್ದಂತೆಯೇ 'ಜಿರಳೆ'ಗಳನ್ನು ಬಂಧಿಸುವುದನ್ನು ನೋಡಿದರೆ, ಬಿಜೆಪಿ ನಾಯಕರಲ್ಲಿ ಭಯ ಎಷ್ಟಿದೆ ಎಂಬುದು ಗೊತ್ತಾಗುತ್ತದೆ. ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್‌ ತಲೆದಂಡ ಆಗಲೇಬೇಕು. ಪ್ರಧಾನಿ ಮೋದಿ ತೊಲಗಲೇಬೇಕು' ಎಂದು ವಾಗ್ದಾಳಿ ನಡೆಸಿದ್ದಾರೆ.

ಸ್ಕಾರ್ಪಿಯೊ ನನ್ನನ್ನು ಹಿಂಬಾಲಿಸುತ್ತಿದೆ: ಯೋಗೇಂದ್ರ ಯಾದವ್

ಕೇರಳಂ ಮಾಜಿ ಮುಖ್ಯಮಂತ್ರಿ ಪಿಣರಾಜಿ ವಿಜಯನ್‌ ದೆಹಲಿ ಪೊಲೀಸರ ವಶಕ್ಕೆ

ಜಂತರ್‌ ಮಂತರ್‌ಗೆ ಹೊರಟಿದ್ದ ವಕೀಲರನ್ನು ವಶಕ್ಕೆ ಪಡೆದ ಪೊಲೀಸರು

ರಾಹುಲ್, ಕೇಜ್ರಿವಾಲ್ ವಿರುದ್ಧ ನವೀನ್ ಕಿಡಿ

ದೇಶದಲ್ಲಿ ಅತ್ಯಂತ ಅಪಾಯಕಾರಿ ಹಾಗೂ ಗಂಭೀರ ಪರಿಸ್ಥಿತಿಯನ್ನು ನಿರ್ಮಿಸಲು ರಾಹುಲ್‌ ಗಾಂಧಿ ನೇತೃತ್ವದ ಇಂಡಿಯಾ ಮೈತ್ರಿಕೂಟ ಹಾಗೂ ಅರವಿಂದ್ ಕೇಜ್ರಿವಾಲ್ ಬೆಂಬಲಿತ ಸಿಜಿಪಿ ಗುಂಪು ಪ್ರಯತ್ನಿಸುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದ ಜನರ ವಿರುದ್ಧ ಯುದ್ಧವೇ: ದೀಪ್ಕೆ ಪ್ರಶ್ನೆ

ನಕ್ಸಲ್ ಪೀಡಿತ ಪ್ರದೇಶಗಳಿಂದ ಸಿಆರ್‌ಪಿಎಫ್ ಪಡೆಗಳನ್ನು ಕರೆಸಿ ದೆಹಲಿಯಲ್ಲಿ ನಿಯೋಜಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ದೇಶದ ಜನರ ವಿರುದ್ಧ ಯುದ್ಧ ಸಾರಲು ಮುಂದಾಗಿದ್ದಾರೆಯೇ ಎಂದು ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಪ್ರಶ್ನಿಸಿದ್ದಾರೆ.

ಮೋದಿ, ಶಾ ದೇಶದ ಜನರ ವಿರುದ್ಧ ಯುದ್ಧ ಸಾರಲು ಬಯಸುತ್ತಿದ್ದಾರೆ: ಅಭಿಜಿತ್‌ ದೀಪ್ಕೆಅಜಿಂಕ್ಯ ಶಿಂದೆ ಹೆಗಲಿಗೆ ಜಂತರ್ ಮಂತರ್ ಪ್ರತಿಭಟನೆಯ ನೇತೃತ್ವ: ದೀಪ್ಕೆ ಘೋಷಣೆ

ಅಜಿಂಕ್ಯ ಶಿಂದೆಗೆ ಹೋರಾಟದ ಹೊಣೆ

ಜಂತರ್ ಮಂತರ್‌ನಲ್ಲಿ ನಡೆಯಲಿರುವ ಪ್ರತಿಭಟನೆಯ ನೇತೃತ್ವವನ್ನು ಸಂಘಟನೆಯ ಉಸ್ತುವಾರಿ ಅಜಿಂಕ್ಯ ಶಿಂದೆ ವಹಿಸಲಿದ್ದಾರೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ತಿಳಿಸಿದ್ದಾರೆ.

ಅಜಿಂಕ್ಯ ಶಿಂದೆ ಹೆಗಲಿಗೆ ಜಂತರ್ ಮಂತರ್ ಪ್ರತಿಭಟನೆಯ ನೇತೃತ್ವ: ದೀಪ್ಕೆ ಘೋಷಣೆ

ನೀವು ನಿಮ್ಮದೇ ಭಯದ ಕೈದಿ' ಎಂಬ ಅಡಿಬರಹದಲ್ಲಿ ಪೊಲೀಸರ ಭದ್ರತೆಯಲ್ಲಿ ಗೋಪುರದೊಳಗೆ ಭೀತಿಯಿಂದ ಅಡಗಿ ಕುಳಿತಿರುವ ಪ್ರಧಾನಿ ಮೋದಿ ಅವರ ವ್ಯಂಗ್ಯಚಿತ್ರವನ್ನು ಪ್ರಕಾಶ್ ರಾಜ್ ಹಂಚಿಕೊಂಡಿದ್ದಾರೆ.

ದೆಹಲಿಯ ತುಗಲಕ್ ರಸ್ತೆಯಲ್ಲಿ ಸೂಕ್ಷ್ಮವಾಗಿ ಪೊಲೀಸ್ ಹದ್ದಿನ ಕಣ್ಣು

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಟಿಎಂಸಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

ಕಲ್ಲು ತೂರಾಟದಲ್ಲಿ ದೆಹಲಿ ಪೊಲೀಸರಿಗೆ ಗಾಯ

CJP protest| ಆಕಾಶವಾಣಿ ಭವನದ ಬಳಿ ಪೊಲೀಸರ ಮೇಲೆ ಕಲ್ಲು ತೂರಾಟ; ಇಬ್ಬರಿಗೆ ಗಾಯ

ಪೊಲೀಸ್ ಸರ್ಪಗಾವಲು, ಪ್ರತಿಭಟನಾಕಾರರು ವಶಕ್ಕೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿದ್ದ ಪ್ರತಿಭಟನೆಗೂ ಮುನ್ನ ರಾಜಕೀಯ ನಾಯಕರು, ಕಾರ್ಯಕರ್ತರು, ವಕೀಲರು, ಪತ್ರಕರ್ತರು ಹಾಗೂ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಮತ್ತು ಮುಖಂಡರಾದ ಸೌರವ್ ದಾಸ್, ಆಶುತೋಷ್ ರಂಕಾ ಅವರನ್ನು ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.

ಸಿಜೆಪಿ ಪ್ರತಿಭಟನೆ: ಮಮತಾ, ಸಿಪಿಎಂ ನಾಯಕರು, ಕೇಜ್ರಿವಾಲ್ ಸೇರಿ ಹಲವರು ವಶಕ್ಕೆ

ರಾಹುಲ್ ಗಾಂಧಿ ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ: ಬಿಜೆಪಿ ಆರೋಪ

ಸಿಜೆ‍ಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆಯ ಅಜ್ಜಿ ನಿಧನ

ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರ ಅಜ್ಜಿ (ತಂದೆಯ ತಾಯಿ) ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. 85 ವರ್ಷದ ಅವರು ಅಸೌಖ್ಯದಿಂದ ಬಳಲುತ್ತಿದ್ದರು.

ಸಿಜೆ‍ಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆಯ ಅಜ್ಜಿ ನಿಧನ

ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರಿ ನ್ಯಾಯಾಲಯಕ್ಕೆ ಸಿಜೆಪಿ ಅರ್ಜಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದನ್ನು ತಡೆಯಲಾಗಿದೆ, ಅಕ್ರಮವಾಗಿ ಗೃಹಬಂಧನದಲ್ಲಿಡಲಾಗಿದೆ ಎಂದು ಆರೋಪಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಕಾನೂನು ವ್ಯವಹಾರಗಳ ಮುಖ್ಯಸ್ಥೆ ರತ್ನಾ ಸಿಂಗ್ ಅವರು ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಶನಿವಾರ (ಅಕ್ಟೋಬರ್ 10) ದೆಹಲಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರಿ ನ್ಯಾಯಾಲಯಕ್ಕೆ ಸಿಜೆಪಿ ಅರ್ಜಿ

CJP ಪ್ರತಿಭಟನೆ ಸಂಪೂರ್ಣ 'ಫ್ಲಾಪ್ ಶೋ' ಆಗಿರುವುದು ಪ್ರಜಾಪ್ರಭುತ್ವದ ಗೆಲುವು: BJP

ರಾಜಧಾನಿಯನ್ನು ಸಂಪೂರ್ಣ ಒತ್ತೆಯಾಳಾಗಿಟ್ಟುಕೊಳ್ಳಲು ಯೋಜಿಸಲಾಗಿದ್ದ ಪ್ರತಿಭಟನೆಯು ಸಂಪೂರ್ಣ 'ಫ್ಲಾಪ್ ಶೋ' ಆಗಿದೆ ಎಂದು ಬಿಜೆಪಿ ನಾಯಕ ಸಂಬಿತ್ ಪಾತ್ರಾ ಹೇಳಿದ್ದಾರೆ.

CJP ಪ್ರತಿಭಟನೆ ಸಂಪೂರ್ಣ 'ಫ್ಲಾಪ್ ಶೋ' ಆಗಿರುವುದು ಪ್ರಜಾಪ್ರಭುತ್ವದ ಗೆಲುವು: BJP

ದೇಶದ ಯುವ ಜನರು ಎಚ್ಚರಗೊಂಡಿದ್ದಾರೆ: ಕೇಜ್ರಿವಾಲ್

ಎಸ್‌ಐಆರ್‌ ವಿರುದ್ಧ ಸಿಜೆಪಿ ಪ್ರತಿಭಟನೆಗೆ ಸಂಬಂಧಿಸಿದಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈವರೆಗೆ ಸುಮಾರು1,000 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅ.12ರಂದು ಮತದಾನದ ಹಕ್ಕಿನ ರಕ್ಷಣೆಗಾಗಿ ಇಂಡಿಯಾ ಮೈತ್ರಿಕೂಟದಿಂದ ಬೃಹತ್ ಪ್ರತಿಭಟನೆ

ಮತದಾರರ ಹಕ್ಕುಗಳ ರಕ್ಷಣೆಗಾಗಿ 'ಇಂಡಿಯಾ' ಮೈತ್ರಿಕೂಟದಿಂದ ಸೋಮವಾರ (ಅ.12) ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾಹಿತಿ ನೀಡಿದ್ದಾರೆ.

ಅ.12ರಂದು ಮತದಾನದ ಹಕ್ಕಿನ ರಕ್ಷಣೆಗಾಗಿ ಇಂಡಿಯಾ ಮೈತ್ರಿಕೂಟದಿಂದ ಬೃಹತ್ ಪ್ರತಿಭಟನೆ

ರಾಷ್ಟ್ರಪತಿ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೇಟಿಯಾಗಲಿರುವ ಇಂಡಿಯಾ ಮೈತ್ರಿಕೂಟದ ನಾಯಕರು

ಕಾಂಗ್ರೆಸ್‌ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ನೇತೃತ್ವದ ಇಂಡಿಯಾ ಮೈತ್ರಿಕೂಟದ ನಿಯೋಗವು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಶುಕ್ರವಾರ ಸಂಜೆ ಭೇಟಿಯಾಗಿ 'ಮತ ಕಳ್ಳತನ'ದ ವಿರುದ್ಧ ಮನವಿ ಸಲ್ಲಿಸಿತು.

ಇದೇ ವಿಚಾರವಾಗಿ ಸೋಮವಾರ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅವರನ್ನೂ ಭೇಟಿಯಾಗಲಿದ್ದೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.

ಇಡೀ ದೇಶವನ್ನೇ ಜಂತರ್ ಮಂತರ್ ಆಗಿ ಪರಿವರ್ತಿಸಿ: ಕೇಜ್ರಿವಾಲ್ ಕರೆ

ಎಸ್‌ಐಆರ್ ವಿರುದ್ಧ ಸಿಜೆಪಿ ಪ್ರತಿಭಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಈವರೆಗೆ 3,000ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಂತರ್ ಮಂತರ್: ಪ್ರತಿಭಟನಾಕಾರರನ್ನು ತಡೆ ಹಿಡಿದ ದೆಹಲಿ ಪೊಲೀಸ್

ವಿದ್ಯಾರ್ಥಿಗಳು ಚಂಬಲ್‌ನ ಡಕಾಯಿತರೇ? ಪೊಲೀಸರ ಕ್ರಮಕ್ಕೆ ದೀಪ್ಕೆ ಪೋಷಕರ ಆಕ್ರೋಶ

ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಚಂಬಲ್‌ನ ಡಕಾಯಿತರೇ ಎಂದು ಕಾಕ್ರೋಚ್‌ ಜನತಾ ಪಾರ್ಟಿಯ (ಸಿಜೆಪಿ) ಸಂಚಾಲಕ ಅಭಿಜಿತ್ ದೀಪ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಭಾರಿ ಪ್ರಮಾಣದಲ್ಲಿ ಪೊಲೀಸರನ್ನು ನಿಯೋಜಿಸಿರುವುದನ್ನು ಪ್ರಶ್ನಿಸಿರುವ ಅವರು, ಸರ್ಕಾರ ಪ್ರಜಾಪ್ರಭುತ್ವಕ್ಕೆ ಬೆಲೆ ನೀಡುತ್ತಿಲ್ಲ ಎಂದು ಶನಿವಾರ ಆರೋಪಿಸಿದ್ದಾರೆ.

ವಿದ್ಯಾರ್ಥಿಗಳು ಚಂಬಲ್‌ನ ಡಕಾಯಿತರೇ? ಪೊಲೀಸರ ಕ್ರಮಕ್ಕೆ ದೀಪ್ಕೆ ಪೋಷಕರ ಆಕ್ರೋಶ

ದೀಪ್ಕೆ ಗೈರಿನಲ್ಲಿ ಸಿಜೆಪಿ ಪ್ರತಿಭಟನೆ ನೇತೃತ್ವ ವಹಿಸಿರುವ ಅಜಿಂಕ್ಯ ಶಿಂಧೆ ಯಾರು?

ಮಹಾರಾಷ್ಟ್ರ ಮೂಲದ ಸಾಮಾಜಿಕ ಹಾಗೂ ರಾಜಕೀಯ ಹೋರಾಟಗಾರರಾಗಿ ಗುರುತಿಸಿಕೊಂಡಿರುವ 35 ವರ್ಷದ ಅಜಿಂಕ್ಯ ಶಿಂಧೆ, ಕಾಕ್ರೋಚ್ ಜನತಾ ಪಾರ್ಟಿಯ(ಸಿಜೆಪಿ) ಪ್ರಮುಖ ನಾಯಕರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

ದೀಪ್ಕೆ ಗೈರಿನಲ್ಲಿ ಸಿಜೆಪಿ ಪ್ರತಿಭಟನೆ ನೇತೃತ್ವ ವಹಿಸಿರುವ ಅಜಿಂಕ್ಯ ಶಿಂಧೆ ಯಾರು?

ದೇಶದಲ್ಲಿ ಪ್ರಜಾಪ್ರಭುತ್ವ ಅಂತ್ಯ, ಸರ್ವಾಧಿಕಾರಿ ಸರ್ಕಾರ: ಪ್ರಿಯಾಂಕಾ ಗಾಂಧಿ

ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನಾಕಾರರ ವಿರುದ್ಧ ದೆಹಲಿ ಪೊಲೀಸರ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, 'ಭಾರತವು ಈಗ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಉಳಿದಿಲ್ಲ ಬದಲಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂದಾಳತ್ವದಲ್ಲಿ 'ಸರ್ವಾಧಿಕಾರ' ನಡೆಯುತ್ತಿದೆ' ಎಂದು ಶನಿವಾರ ಗಂಭೀರ ಆರೋಪ ಮಾಡಿದ್ದಾರೆ.

ದೇಶದಲ್ಲಿ ಪ್ರಜಾಪ್ರಭುತ್ವ ಅಂತ್ಯ, ಸರ್ವಾಧಿಕಾರಿ ಸರ್ಕಾರ: ಪ್ರಿಯಾಂಕಾ ಗಾಂಧಿ

ಆಡಳಿತ ಪಕ್ಷಕ್ಕೆ ಚುನಾವಣಾ ಆಯೋಗ ನೆರವು: ಪ್ರಶಾಂತ್ ಕಿಶೋರ್ ಆರೋಪ

ಪ್ರಶಾಂತ್ ಕಿಶೋರ್ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ಸಮಾಜದ ದೊಡ್ಡ ವಿಭಾಗದ ಜನರಿಗೆ ಅಸಮಾಧಾನವಿದೆ

ನಾವು ನಿಮ್ಮನ್ನು ಸುತ್ತುವರಿದಿದ್ದು, ಹಿಂಜರಿಯುವ ಪ್ರಶ್ನೆಯೇ ಇಲ್ಲ ಎಂದು ರಾಹುಲ್ ಗಾಂಧಿ ವಿಡಿಯೊ ಸಂದೇಶದ ಮೂಲಕ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಬೃಹತ್ ಮಟ್ಟದಲ್ಲಿ ಪ್ರತಿಭಟನೆ ನಡೆಸುವಂತೆ ಯುವ ಜನರಿಗೆ ಕರೆ ನೀಡಿದ್ದಾರೆ.

ಮೋದಿ, ಶಾ ವ್ಯಕ್ತಿತ್ವದ ಮೂಲ ಸ್ವಭಾವವೇ ಹೇಡಿತನ: ರಾಹುಲ್ ವಾಗ್ದಾಳಿ

'ಕಳೆದ ಒಂದು ದಶಕದಿಂದ ನರೇಂದ್ರ ಮೋದಿ ಮತ್ತು ಆರ್‌ಎಸ್‌ಎಸ್‌ನವರ ವಿರುದ್ಧ ನಾನು ಹೋರಾಡುತ್ತಿದ್ದು, ಅವರ ಮನಸ್ಥಿತಿ ಬಗ್ಗೆ ಚೆನ್ನಾಗಿ ಅರಿಯಬಲ್ಲೆ. ಅವರ ವ್ಯಕ್ತಿತ್ವದ ಮೂಲ ಸ್ವಭಾವವೇ ಹೇಡಿತನ' ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಮೋದಿ, ಶಾ ವ್ಯಕ್ತಿತ್ವದ ಮೂಲ ಸ್ವಭಾವವೇ ಹೇಡಿತನ: ರಾಹುಲ್ ವಾಗ್ದಾಳಿರಾಹುಲ್ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಡೋಭಾಲ್ ಈ ಕಥೆಯ 'ವಿಲನ್‌ಗಳು'

ಪ್ರತಿಭಟನೆಯಲ್ಲಿ ಭಾಗವಹಿಸಲು ಸಾಧ್ಯವಾಗಿರುವುದಕ್ಕೆ ಹೆಮ್ಮೆಯಿದೆ: ಪಿಣರಾಯಿ ವಿಜಯನ್

ಚೆನ್ನೈಯಲ್ಲಿ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಸಂವಾದ

ದೇಶದ ಸಂವಿಧಾನದ ಬಗ್ಗೆ ರಾಹುಲ್ ಗಾಂಧಿಗೆ ಗೌರವವಿಲ್ಲ: ಕೇಂದ್ರ ಸಚಿವ ಪಿಯೂಷ್ ಗೋಯಲ್

ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಪ್ರತಿಕ್ರಿಯೆ

ಅಪರಾಧಿಗಳಂತೆ ನೋಡಿಕೊಳ್ಳಲಾಯಿತು: ಮಮತಾ ಆರೋಪ

ಮುಂಬೈಯಲ್ಲಿ ನಟ ಇಮ್ರಾನ್ ಖಾನ್ ಪೊಲೀಸ್ ವಶಕ್ಕೆ

ಕೇಂದ್ರ ಸರ್ಕಾರದ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ದೆಹಲಿಯಲ್ಲಿ ಕಾಕ್ರೋಚ್ ಪ್ರತಿಭಟನೆ

ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ, ಪೊಲೀಸ್ ಸರ್ಪಗಾವಲು ಚಿತ್ರಗಳಲ್ಲಿ

    PHOTOS: ರಾಷ್ಟ್ರರಾಜಧಾನಿಯಲ್ಲಿ ಪೊಲೀಸರ ಭದ್ರಕೋಟೆ ನಡುವೆ 'ಕಾಕ್ರೋಚ್' ಪ್ರತಿಭಟನೆ

ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆಯ ಕಾವು

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸಿದ ಪ್ರತಿಭಟನೆ ಶನಿವಾರ ರಾಷ್ಟ್ರ ರಾಜಧಾನಿಯಲ್ಲಿ ಹಲವು ನಾಟಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಯಿತು. ಜಿರಳೆಯ ಮೀಸೆಯಂತಿರುವ ಆಂಟೆನಾ ಹೊಂದಿದ ಹೆಲ್ಮೆಟ್ ಧರಿಸಿ ಕೆಲವರು ಪ್ರತಿಭಟಿಸಿದರೆ, ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆಲವರು ಗುರುದ್ವಾರದಲ್ಲಿ ಆಶ್ರಯ ಪಡೆದರು.

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್‌ ಕುಮಾರ್‌ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ಜಂತರ್‌ ಮಂತರ್‌ನಲ್ಲಿ ಶನಿವಾರ ಆಯೋಜಿಸಿದ ಪ್ರತಿಭಟನೆಯು ಹಲವಾರು ನಾಟಕೀಯ ಬೆಳವಣಿಗೆಗೆ ಸಾಕ್ಷಿಯಾಯಿತು.

ಪ್ರತಿಭಟನಾಕಾರರನ್ನು ಹತ್ತಿಕ್ಕಲು ಪೊಲೀಸರು ಯತ್ನಿಸಿದರು. ಅಲ್ಲದೆ ಅಭಿಜಿತ್ ದೀಪ್ಕೆ ಸೇರಿದಂತೆ ಪ್ರಮುಖ ನಾಯಕರನ್ನು ವಶಪಡಿಸಿಕೊಂಡರು. ಅತ್ತ ಯುವ ಜನರ ಪ್ರತಿಭಟನೆಯು ಕವಲೊಡೆಯಿತು. ಇದರಿಂದ ಅಕ್ಷರಶಃ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.

ಪ್ರತಿಭಟನಾಕಾರರನ್ನು ಬಿಡುಗಡೆ ಮಾಡದಿದ್ದರೆ ಉಪವಾಸ ಸತ್ಯಾಗ್ರಹ ಅಥವಾ ಪಾದಯಾತ್ರೆ ಮಾಡುವುದಾಗಿ ಸೊನಮ್ ವಾಂಗ್ಚೂಕ್ ಎಚ್ಚರಿಕೆ ನೀಡಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Prajavani