Dailyhunt Logo
  • Light mode
    Follow system
    Dark mode
    • Play Story
    • App Story
ಸಿಜೆಪಿ ಪ್ರತಿಭಟನೆ: ಮನೆಯಲ್ಲೇ ಯೂಟ್ಯೂಬರ್ ಧ್ರುವ್ ರಾಠಿ  ಪೊಲೀಸರ ವಶಕ್ಕೆ

ಸಿಜೆಪಿ ಪ್ರತಿಭಟನೆ: ಮನೆಯಲ್ಲೇ ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸರ ವಶಕ್ಕೆ

ನವದೆಹಲಿ: ಸಿಜೆಪಿ ಆಯೋಜಿಸಿರುವ ಪ್ರತಿಭಟನೆ ನಡುವೆಯೇ, ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಅವರನ್ನು ಪೊಲೀಸರು ಹರಿಯಾಣದ ಗುರುಗ್ರಾಮದಲ್ಲಿರುವ ಅವರ ನಿವಾಸದಿಂದ ಶನಿವಾರ ಬೆಳಿಗ್ಗೆ ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಳಿಗ್ಗೆ 8 ಗಂಟೆ ಸುಮಾರಿಗೆ ಗುರುಗ್ರಾಮದ ಸೆಕ್ಟರ್ 56 ರಲ್ಲಿರುವ ಧ್ರುವ್ ರಾಠಿ ಮನೆಗೆ ಆಗಮಿಸಿದ 50ಕ್ಕೂ ಹೆಚ್ಚು ಪೊಲೀಸರು ಧ್ರುವ್ ರಾಠಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ಸಿಜೆಪಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ ಕಾವು ಏರಿರುವ ಬೆನ್ನಲ್ಲೇ ಈ ದಿಢೀರ್ ಬೆಳವಣಿಗೆ ನಡೆದಿದೆ. ಪ್ರತಿಭಟನೆಯ ಭಾಗವಾಗಿ ಜಂತರ್ ಮಂತರ್ ಕಡೆಗೆ ಜನರು ತೆರಳದಂತೆ ತಡೆಯಲು ದೆಹಲಿ ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ.

ಧ್ರುವ್ ರಾಠಿ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಿಜಿಪಿ ಬೆಂಬಲಿಗರು ಹಾಗೂ ಸಾಮಾಜಿಕ ಜಾಲತಾಣ ಬಳಕೆದಾರರು ಸರ್ಕಾರ ಮತ್ತು ಪೊಲೀಸರ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಇನ್ನೊಂದೆಡೆ, ಗುರುಗ್ರಾಮ ಮತ್ತು ದೆಹಲಿ ಗಡಿ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

ಧ್ರುವ್ ರಾಠಿ ಅವರನ್ನು ಸದ್ಯ ಎಲ್ಲಿಗೆ ಕರೆದೊಯ್ಯಲಾಗಿದೆ ಎಂಬುದು ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರಿಂದಲೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

Dailyhunt
Disclaimer: This content has not been generated, created or edited by Dailyhunt. Publisher: Prajavani