ಬೆಂಗಳೂರು: ಕನ್ನಡ ಚಿತ್ರರಂಗದ ನಿರ್ದೇಶಕ, ಲೇಖಕ, ಪತ್ರಕರ್ತ ಎನ್.ಎಸ್. ಶಂಕರ್ ಅವರು ಬೆಂಗಳೂರಿನಲ್ಲಿ ಭಾನುವಾರ ನಿಧನರಾಗಿದ್ದಾರೆ.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶಂಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
ಪತ್ರಕರ್ತರಾಗಿ ವೃತ್ತಿಜೀವನ ಆರಂಭಿಸಿದ್ದ ಅವರು ಕನ್ನಡದ ಹಲವು ಪ್ರಮುಖ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದರು. ಲೇಖಕರಾಗಿಯೂ ಹೆಸರು ಮಾಡಿದ್ದರು.
1997ರಲ್ಲಿ ತೆರೆಕಂಡ 'ಉಲ್ಟಾ ಪಲ್ಟಾ' ಸಿನಿಮಾ ನಿರ್ದೇಶನದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು.

