ನವದೆಹಲಿ: ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಬುಧವಾರ ತಿಳಿಸಿದ್ದಾರೆ.
ಸೋನಿಯಾ ಅವರು ಮಂಗಳವಾರ ರಾತ್ರಿ 10:22 ಗಂಟೆಗೆ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದರು.
'ಹೊಟ್ಟೆ ಮತ್ತು ಮೂತ್ರಪಿಂಡದಲ್ಲಿನ ಸಂಭವನೀಯ ಸೋಂಕು ಪತ್ತೆಗೆ ವೈದ್ಯರು ಪರೀಕ್ಷೆ ನಡೆಸುತ್ತಿದ್ದಾರೆ.
ಯಾವುದೇ ಗಂಭೀರ ಸಮಸ್ಯೆಯಿಲ್ಲ' ಎಂದು ಆಸ್ಪತ್ರೆಯ ಮುಖ್ಯಸ್ಥ ಡಾ.ಅಜಯ್ ಸ್ವರೂಪ್ ಅವರು ತಿಳಿಸಿದ್ದಾರೆ.

