ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 22 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 123ಕ್ಕೆ ಏರಿಕೆಯಾಗಿದೆ.
ಕೋಲಾರ ತಾಲ್ಲೂಕಿನ 8 ಮಂದಿಗೆ, ಮಾಲೂರು ತಾಲ್ಲೂಕಿನ ಒಬ್ಬರಿಗೆ, ಕೆಜಿಎಫ್ ತಾಲ್ಲೂಕಿನ 5 ಮಂದಿಗೆ, ಮುಳಬಾಗಿಲು ತಾಲ್ಲೂಕಿನ ಇಬ್ಬರಿಗೆ, ಶ್ರೀನಿವಾಸಪುರ ತಾಲ್ಲೂಕಿನ 6 ಮಂದಿಗೆ ಸೋಂಕು ಬಂದಿದೆ.
ಕೋವಿಡ್ ಕುರಿತ ಎಲ್ಲಾ ಲೇಟೆಸ್ಟ್ ಅಪ್‌ಡೇಟ್ಸ್ ಓದಿ
ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 17 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 5 ಮಂದಿ, ಬಂಗಾರಪೇಟೆ ತಾಲ್ಲೂಕು ಹಾಗೂ ಹೊರ ಜಿಲ್ಲೆಯ ತಲಾ ಒಬ್ಬರು, ಕೆಜಿಎಫ್ ತಾಲ್ಲೂಕಿನ ಇಬ್ಬರು, ಮುಳಬಾಗಿಲು ತಾಲ್ಲೂಕಿನ 3 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.
