ಕುಣಿಗಲ್: ಸ್ಪರ್ಧಾತ್ಮಕ ಪ್ರಪಂಚದಲ್ಲಿ ಗುಣಮಟ್ಟಕ್ಕೆ ಆದ್ಯತೆ. ಗುಣಮಟ್ಟದ ಶಿಕ್ಷಣ, ಪೂರ್ವ ಸಿದ್ಧತೆಯೊಂದಿಗೆ ಪರೀಕ್ಷೆ ಎದುರಿಸಿ ಯಶಸ್ವಿಯಾಗಬೇಕು ಎಂದು ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ಬಿ.ರಾಮಸ್ವಾಮಿ ಗೌಡ ಹೇಳಿದರು.
ಜ್ಞಾನಭಾರತಿ ಪದವಿಪೂರ್ವ ಕಾಲೇಜಿನಲ್ಲಿ 2026-27 ಸಾಲಿನ ಸಿಇಟಿ ಮತ್ತು ನೀಟ್ ಪೂರ್ವ ಸಿದ್ಧತಾ ತರಗತಿಗಳಿಗೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣ ಜೀವನದ ಗತಿ ನಿರ್ಧರಿಸುವ ಹಂತವಾಗಿದ್ದು, ವಿಷಯಗಳ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಬೇಕು ಎಂದರು.
'ವೇಗಾಸ್' ನೀಟ್ ಅಕಾಡೆಮಿಯ ದೇವಿಪ್ರಿಯ 'ವಿದ್ಯಾರ್ಥಿಗಳಿಗೆ ಮಾಹಿತಿ ಕೊರತೆಯಿಂದ ಸಮಸ್ಯೆಯಾಗುತ್ತಿದ್ದು, ಶಿಕ್ಷಣ ಸಂಸ್ಥೆಗಳು ಸಕಾಲದಲ್ಲಿ ಸೂಕ್ತ ಮಾರ್ಗದರ್ಶನ ನೀಡಬೇಕಿದೆ. ದಾಖಲೆಗಳು ಅತಿ ಮುಖ್ಯವಾಗಿದ್ದು ಪೋಷಕರು ಎಚ್ಚರಿಕೆಯಿಂದ ಸಂಗ್ರಹಿಸಬೇಕು' ಎಂದರು. ಉಪನ್ಯಾಸಕ ಪುಟ್ಟಸ್ವಾಮಿ, ಪ್ರಾಂಶುಪಾಲ ಗೋವಿಂದೇಗೌಡ, ಶಿವಕುಮಾರ್, ಮುಖ್ಯ ಶಿಕ್ಷಕ ಪ್ರಕಾಶ್ ಮೂರ್ತಿ ಹಾಜರಿದ್ದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260706-17-132777287

