ಸುಬ್ರಹ್ಮಣ್ಯ: ಇಲ್ಲಿನ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿ ಸರ್ಕಾರ, ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಶಾಲೆಯ ಮುಖ್ಯಶಿಕ್ಷಕಿ ನಂದಾ ಹರೀಶ್ ವಹಿಸಿದ್ದರು. ಅತಿಥಿಗಳಾಗಿ ಹೈಕೋರ್ಟ್ ಹಿರಿಯ ವಕೀಲ, ಸಂಸ್ಥೆಯ ಹಿರಿಯ ವಿದ್ಯಾರ್ಥಿ ಪ್ರವೀಣ್ ಕುಮಾರ್ ಕೆ.ಎನ್.
ವಿವಿಧ ಸಂಘಗಳನ್ನು ಉದ್ಘಾಟಿಸಿದರು. ಅತಿಥಿಗಳಾಗಿ ಚಾಕೋ ಫಿಲಿಪ್, ವಿಶ್ವನಾಥ್, ಅಶ್ವಿನಿ, ತೀರ್ಥಕುಮಾರಿ, ರಾಮಕೃಷ್ಣ ಹೊಳ್ಳಾರು ಭಾಗವಹಿಸಿದ್ದರು.
ಚೇತಾಕ್ಷಿ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಶಿಕ್ಷಕಿ ಮೋಕ್ಷ ಕಾರ್ಯಕ್ರಮ ನಿರೂಪಿಸಿದರು. ಕೃಷ್ಣ ಭಟ್ ಸ್ವಾಗತಿಸಿದರು. ರಕ್ಷಿತ್ ಸುಳ್ಳಿ ವಂದಿಸಿದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260706-29-1955237658

