Dailyhunt Logo
  • Light mode
    Follow system
    Dark mode
    • Play Story
    • App Story
'ಟಾಕ್ಸಿಕ್' ಬಿಡುಗಡೆಗೂ ಮುನ್ನ ಧರ್ಮಸ್ಥಳಕ್ಕೆ ನಟ ಯಶ್ ಭೇಟಿ

'ಟಾಕ್ಸಿಕ್' ಬಿಡುಗಡೆಗೂ ಮುನ್ನ ಧರ್ಮಸ್ಥಳಕ್ಕೆ ನಟ ಯಶ್ ಭೇಟಿ

ರಾಕಿಂಗ್ ಸ್ಟಾರ್ ಯಶ್‌ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ನಾಳೆ (ಆ.26) ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ನಟ ಯಶ್‌ ಅವರು ಇಂದು (ಆ.25) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ನಟ ಯಶ್

ದಳಪತಿ ವಿಜಯ್ ರೀತಿಯಲ್ಲೇ ರಾಜಕೀಯ ಪ್ರವೇಶಿಸುತ್ತಾರಾ? ನಟ ಯಶ್ ಹೇಳಿದ್ದಿಷ್ಟುತೆರೆ ಮೇಲಷ್ಟೇ ಅಲ್ಲ, ನಿಜ ಜೀವನದಲ್ಲೂ ಯಶ್ ಅದ್ಭುತ ವ್ಯಕ್ತಿ: ನಟ ಅನುಪಮ್ ಖೇರ್

ಚೆನ್ನೈನಲ್ಲಿದ್ದ ಯಶ್, ಇಂದು ಬೆಳಿಗ್ಗೆ ವಿಶೇಷ ವಿಮಾನದ ಮೂಲಕ ಮಂಗಳೂರಿನ ಏರ್‌ಪೋರ್ಟ್‌ಗೆ ಆಗಮಿಸಿದರು. ಏರ್‌ಪೋರ್ಟ್‌ನಲ್ಲಿ ನೆರೆದಿದ್ದ ನೂರಾರು ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಅದ್ದೂರಿಯಾಗಿ ಸ್ವಾಗತ ಕೋರಿದರು.

ನಟ ಯಶ್

ಯಶ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲಲ್ಲ. ಆಗಾಗ ಅವರು ಕುಟುಂಬ ಸಮೇತ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿ ದರ್ಶನವನ್ನು ಪಡೆಯುತ್ತಲೇ ಇರುತ್ತಾರೆ. ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಯಶ್ ಅವರು ಧಾರ್ಮಿಕ ಆಚರಣೆಗಳ ವಿಚಾರದಲ್ಲಿ ಮಾತ್ರ ಹಿಂದೆ ಉಳಿದಿಲ್ಲ.

ನಟ ಯಶ್

ತಮ್ಮ ಹಿಂದಿನ ಎಲ್ಲಾ ಯಶಸ್ವಿ ಸಿನಿಮಾಗಳ ಬಿಡುಗಡೆಗೂ ಮುನ್ನ ನಟ ಯಶ್ ದೇವರ ದರ್ಶನ, ವಿಶೇಷ ಪೂಜೆ ಸಲ್ಲಿಸುತ್ತಲೇ ಇರುತ್ತಾರೆ. ಯಶ್ ಅವರ ಈ ಧಾರ್ಮಿಕ ಭೇಟಿ ಅಭಿಮಾನಿಗಳಲ್ಲಿ ಭಾರಿ ಕುತೂಹಲವನ್ನು ಮೂಡಿಸಿದೆ. ಕಂದು ಬಣ್ಣ ಪಂಚೆ ಧರಿಸಿದ ಯಶ್‌ ಹಾಗೂ ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥಾಪಕ ವೆಂಕಟ್ ಕೆ. ನಾರಾಯಣ ಅವರು ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾದರು.

Dailyhunt
Disclaimer: This content has not been generated, created or edited by Dailyhunt. Publisher: Prajavani