ತಾವರೆಕೆರೆ (ಚನ್ನಗಿರಿ): 'ರಾಜ್ಯದಾದ್ಯಂತ ಕೊರೊನಾ ಎರಡನೇ ಅಲೆ ತೀವ್ರವಾಗಿ ಹರಡುತ್ತಿದ್ದು, ಸಾವಿರಾರು ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲೂ ಸೋಂಕಿತರ ಪ್ರಮಾಣ ಹೆಚ್ಚಳವಾಗುತ್ತಿರುವುದು ಕಳವಳಕಾರಿ. ನಮ್ಮ ಗ್ರಾಮವನ್ನು ಕೊರೊನಾ ಮುಕ್ತ ಗ್ರಾಮವನ್ನಾಗಿಸಲು ಗ್ರಾಮಸ್ಥರೆಲ್ಲಾ ಸಂಕಲ್ಪ ಮಾಡೋಣ' ಎಂದು ಶಿಲಾಮಠದ ಡಾ. ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ತಾಲ್ಲೂಕಿನ ತಾವರೆಕೆರೆ ಗ್ರಾಮದಲ್ಲಿ ಗುರುವಾರ ನಾಡಕಚೇರಿ, ಗ್ರಾಮ ಪಂಚಾಯಿತಿ ಹಾಗೂ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ನಡೆದ ಕೊರೊನಾ ಜಾಗೃತಿ ಅಭಿಯಾನದಲ್ಲಿ ಮಾತನಾಡಿದರು.
'ಕೆಮ್ಮು, ಶೀತ, ನೆಗಡಿ, ಜ್ವರ ಮುಂತಾದ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳಬೇಕು.
ಕೋವಿಡ್ ಕುರಿತ ಎಲ್ಲಾ ಲೇಟೆಸ್ಟ್ ಅಪ್‌ಡೇಟ್ಸ್ ಓದಿ
ಉಲ್ಬಣವಾದ ಮೇಲೆ ಚಿಕಿತ್ಸೆಗೆ ಹೋದರೇ ಪ್ರಾಣವನ್ನು ಕಳೆದುಕೊಳ್ಳ
ಬೇಕಾಗುತ್ತದೆ. 45 ವರ್ಷ ಮೇಲ್ಪಟ್ಟ
ವರು ಕಡ್ಡಾಯವಾಗಿ ಕೊರೊನಾ ಲಸಿಕೆ
ಹಾಕಿಸಿಕೊಳ್ಳಬೇಕು. ಮುನ್ನೆಚ್ಚರಿಕೆ
ಯಿಂದ ಇದ್ದರೆ ರೋಗ ಬರುವುದನ್ನು ತಡೆಗಟ್ಟಬಹುದು' ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ,
ಪಿಡಿಒ ರೇಖಾ, ಗ್ರಾಮ ಪಂಚಾಯಿತಿ ಸದಸ್ಯರಾದ ಮೃತ್ಯುಂಜಯಪ್ಪ, ಅಣ್ಣಾಮಲೈ, ಸಂದೀಪ್, ಉಪ ತಹಶೀಲ್ದಾರ್ ಸುಧೀರ್, ಮುಖಂಡ ಸಾಬುಲಾಲ್, ಕೆ. ದೇವರಾಜ್ ಇದ್ದರು.

