ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ, ನಟ ಸಿ. ಜೋಸೆಫ್ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಅವರ ವಿಚ್ಛೇದನ ಅರ್ಜಿಯ ವಿಚಾರಣೆಯನ್ನು ಚೆಂಗಲ್ಪಟ್ಟು ನ್ಯಾಯಾಲಯವು ಆಗಸ್ಟ್ 7ಕ್ಕೆ ಮುಂದೂಡಿದೆ ಎಂದು ವರದಿಯಾಗಿದೆ.
ಕಳೆದ ಫೆಬ್ರುವರಿಯಲ್ಲಿ ಸಂಗೀತಾ ಅವರು ವಿಜಯ್ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು.
ಆರಂಭದಲ್ಲಿ ಈ ಪ್ರಕರಣದ ವಿಚಾರಣೆ ಏಪ್ರಿಲ್ 20ಕ್ಕೆ ನಿಗದಿಯಾಗಿತ್ತು. ಆದರೆ ಆ ದಿನ ವಿಜಯ್ ಮತ್ತು ಸಂಗೀತಾ ಇಬ್ಬರೂ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ, ಜೂನ್ 15 ರಂದು ಖುದ್ದಾಗಿ ಹಾಜರಾಗುವಂತೆ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯವು ಆದೇಶಿಸಿತ್ತು.
Good News: ವಾಹನಗಳಿಗೆ ಸಂಪೂರ್ಣ ಎಥೆನಾಲ್ ಬಳಕೆಗೆ ಅಸ್ತು; ಕೇಂದ್ರ ಸಚಿವ ಗಡ್ಕರಿಮಹಿಳೆಯರ ವಿಚಾರದಲ್ಲಿ ಉತ್ತಮ ಅಭಿರುಚಿಯಿದೆ: ಅಮೀರ್ ಖಾನ್ ಕಿಚಾಯಿಸಿದ ನಟಿ ಕಾಜೋಲ್ಸಂಗೀತಾ ಅವರು ಸಲ್ಲಿಸಿರುವ ವಿಚ್ಛೇದನ ಅರ್ಜಿಯಲ್ಲಿ ವಿಜಯ್ ಅವರ ವೈಯಕ್ತಿಕ ಜೀವನದ ಬಗ್ಗೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮತ್ತೊಬ್ಬ ನಟಿಯೊಂದಿಗೆ ಅಕ್ರಮ ಸಂಬಂಧ ಹೊಂದಿರುವುದರ ಬಗ್ಗೆ 2021ರಲ್ಲಿ ತಿಳಿಯಿತು ಎಂದು ಸಂಗೀತಾ ಉಲ್ಲೇಖಿಸಿದ್ದಾರೆ.
ವಿಜಯ್ ಮತ್ತು ಆ ನಟಿಯ ಸಂಬಂಧದಿಂದಾಗಿ ತಮಗೆ ಹಾಗೂ ತಮ್ಮ ಇಬ್ಬರು ಮಕ್ಕಳಾದ ಜೇಸನ್ ಸಂಜಯ್ ಮತ್ತು ದಿವ್ಯಾ ಸಾಶಾಗೆ ತೀವ್ರ ಮುಖಭಂಗವಾಗಿದೆ ಎಂದು ಸಂಗೀತಾ ಹೇಳಿದ್ದಾರೆ. ಆ ನಟಿಯು ವಿಜಯ್ ಜೊತೆಗಿನ ಸಾರ್ವಜನಿಕ ಓಡಾಟದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದರು ಎಂದು ಅವರು ಆರೋಪಿಸಿದ್ದಾರೆ.
ಇದರೊಂದಿಗೆ, ತಮಗೆ ಈ ಹಿಂದೆ ನೀಡಲಾಗಿದ್ದ ಸೌಲಭ್ಯಗಳನ್ನು ವಿಜಯ್ ಹಿಂಪಡೆದಿದ್ದಾರೆ. ಆರ್ಥಿಕ ನಿರ್ಬಂಧಗಳನ್ನು ಹೇರಿದ್ದಾರೆ ಮತ್ತು ತಮ್ಮ ಮುಕ್ತ ಓಡಾಟಕ್ಕೂ ತಡೆಯೊಡ್ಡಿದ್ದಾರೆ ಎಂದು ಸಂಗೀತಾ ಅಳಲು ತೋಡಿಕೊಂಡಿದ್ದಾರೆ. ಈ ಎಲ್ಲ ಕಾರಣಗಳಿಂದ ತಮಗೆ ತೀವ್ರ ಮಾನಸಿಕ ಕಿರುಕುಳ ಉಂಟಾಗಿದ್ದು, ವಿಶೇಷ ವಿವಾಹ ಕಾಯ್ದೆಯ ಅಡಿಯಲ್ಲಿ ದಾಂಪತ್ಯ ಜೀವನ ಕೊನೆಗೊಳಿಸಲು ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ.
ವಿಜಯ್ ಮತ್ತು ಸಂಗೀತಾ ಅವರು 1999ರಲ್ಲಿ ವಿವಾಹವಾಗಿದ್ದು, ಇದೀಗ ತಮ್ಮ 27 ವರ್ಷಗಳ ಸುದೀರ್ಘ ದಾಂಪತ್ಯ ಜೀವನವನ್ನು ಕೊನೆಗೊಳಿಸಲು ಮುಂದಾಗಿದ್ದಾರೆ.
ಮತ್ತೊಂದೆಡೆ ರಾಜಕೀಯ ರಂಗದಲ್ಲಿ ಸಕ್ರಿಯರಾಗಿರುವ ನಟ ವಿಜಯ್ ಅವರ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವು ಇತ್ತೀಚೆಗೆ ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಐತಿಹಾಸಿಕ ಜಯ ಸಾಧಿಸಿದೆ. ಕಳೆದ 60 ವರ್ಷಗಳಿಂದ ತಮಿಳುನಾಡನ್ನು ಆಳುತ್ತಿದ್ದ ಪ್ರಮುಖ ದ್ರಾವಿಡ ಪಕ್ಷಗಳಾದ ಡಿಎಂಕೆ ಮತ್ತು ಎಐಐಡಿಎಂಕೆಯನ್ನು ಸೋಲಿಸಿ ವಿಜಯ್ ನೇತೃತ್ವದ ಪಕ್ಷ ಅಧಿಕಾರ ಹಿಡಿದಿದ್ದು, ಮೇ 10 ರಂದು ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

