Dailyhunt Logo
  • Light mode
    Follow system
    Dark mode
    • Play Story
    • App Story
ತಮಿಳುನಾಡು ಖಾಸಗಿ ಶಾಲೆಗಳಲ್ಲಿ ಶುಲ್ಕ ಪಟ್ಟಿ ಪ್ರದರ್ಶನ ಕಡ್ಡಾಯಗೊಳಿಸಿದ ವಿಜಯ್

ತಮಿಳುನಾಡು ಖಾಸಗಿ ಶಾಲೆಗಳಲ್ಲಿ ಶುಲ್ಕ ಪಟ್ಟಿ ಪ್ರದರ್ಶನ ಕಡ್ಡಾಯಗೊಳಿಸಿದ ವಿಜಯ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅಧಿಕಾರಕ್ಕೆ ಬಂದಾಗಿನಿಂದ ಒಂದೊಂದೇ ಸುಧಾರಣಾ ಕ್ರಮಗಳನ್ನು ಜಾರಿಗೆ ತರುತ್ತಿದ್ದಾರೆ. ಈಗ ಶಿಕ್ಷಣದ ಮೇಲೆ ಗಮನಹರಿಸಿರುವ ಅವರು, ಎಲ್ಲಾ ಖಾಸಗಿ ಶಾಲೆಗಳು ತಮ್ಮ ಸೂಚನಾ ಫಲಕಗಳಲ್ಲಿ ಸರ್ಕಾರ ನಿಗದಿಪಡಿಸಿದ ಬೋಧನಾ ಶುಲ್ಕದ ವಿವರಗಳನ್ನು ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸಿದ್ದಾರೆ.

ಖಾಸಗಿ ಾSAಲೆಗಳ ಶುಲ್ಕ ಲೂಟಿಗೆ ಕಡಿವಾಣ ಹಾಕಲು ವಿಜಯ್ ಈ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ವರದಿ ತಿಳಿಸಿದೆ.

ಖಾಸಗಿ ಶಾಲೆಗಳು ಸರ್ಕಾರ ನಿಗದಿಪಡಿಸಿದ ಶುಲ್ಕಕ್ಕಿಂತ ಅಧಿಕ ಶುಲ್ಕ ವಸೂಲಿ ಮಾಡುತ್ತಿವೆ ಎಂಬ ಕುರಿತಾದ ದೂರುಗಳ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಈ ಕ್ರಮ ಕೈಗೊಂಡಿದೆ.

ಜೂನ್ 4 ರಿಂದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಬಾಗಿಲು ತೆರೆಯಲಿದ್ದು, ಯಾವುದೇ ಖಾಸಗಿ ಶಾಲೆಯು ನಿಗದಿತ ಮೊತ್ತಕ್ಕಿಂತ ಹೆಚ್ಚಿನ ಶುಲ್ಕವನ್ನು ವಿಧಿಸಿದರೆ, ಅದರ ಮಾನ್ಯತೆಯನ್ನು ರದ್ದುಗೊಳಿಸಲಾಗುವುದು ಎಂದು ಭಾನುವಾರ ಅಧಿಕಾರಿ ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ 13,000ಕ್ಕೂ ಹೆಚ್ಚು ಮಾನ್ಯತೆ ಪಡೆದ ಖಾಸಗಿ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದ ಅಧಿಕಾರಿ, ಪೋಷಕರಿಂದ ಯಾವುದೇ ಗುಪ್ತ ಪ್ರವೇಶ ಶುಲ್ಕ ಸಂಗ್ರಹಿಸುವುದನ್ನು ನಿಲ್ಲಿಸಲು ಶಾಲೆಗಳಿಗೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಈ ಆದೇಶವನ್ನು ತಮಿಳುನಾಡು ಶಾಲೆಗಳು ಶುಲ್ಕ ಸಂಗ್ರಹ ನಿಯಂತ್ರಣ ತಿದ್ದುಪಡಿ ಕಾಯ್ದೆ ಅಡಿ ಮಾಡಲಾಗಿದೆ. ಈ ಕಾಯ್ದೆಯಡಿ, ಉನ್ನತ ಅಧಿಕಾರಿಗಳು ಮತ್ತು ಶಿಕ್ಷಣ ತಜ್ಞರನ್ನು ಒಳಗೊಂಡ ಸಮಿತಿಯು ಪ್ರಮಾಣಿತ ಶುಲ್ಕವನ್ನು ನಿರ್ಧರಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಯಾವುದೇ ಶಾಲೆಗಳು ಅತಿಯಾದ ಶುಲ್ಕವನ್ನು ಸಂಗ್ರಹಿಸುತ್ತಿರುವುದು ಕಂಡುಬಂದರೆ ಪೋಷಕರು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಬಹುದು ಎಂದು ಅಧಿಕಾರಿ ಹೇಳಿದ್ದಾರೆ.

ಮೊದಲ ಸ್ಥಾನಕ್ಕೆ ಡಿಕೆಶಿ: ದೇಶದ ಟಾಪ್ 10 ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿ ಇಂತಿದೆಡಿಕೆಶಿ ಒಂದು ಬಾರಿಯ ಸಿಎಂ ಅಲ್ಲ, ದೀರ್ಘಾವಧಿ ಅಧಿಕಾರದಲ್ಲಿರುತ್ತಾರೆ: ಜ್ಯೋತಿಷಿ
Dailyhunt
Disclaimer: This content has not been generated, created or edited by Dailyhunt. Publisher: Prajavani