Dailyhunt Logo
  • Light mode
    Follow system
    Dark mode
    • Play Story
    • App Story
ಟಿಎಂಸಿ ಶಾಸಕರು ಮಮತಾ ಬ್ಯಾನರ್ಜಿ ಜೊತೆಗಿರಲಿದ್ದಾರೆ: ಸೋಭಾಂದೇಬ್ ಚಟ್ಟೋಪಾಧ್ಯಾಯ

ಟಿಎಂಸಿ ಶಾಸಕರು ಮಮತಾ ಬ್ಯಾನರ್ಜಿ ಜೊತೆಗಿರಲಿದ್ದಾರೆ: ಸೋಭಾಂದೇಬ್ ಚಟ್ಟೋಪಾಧ್ಯಾಯ

ಕೋಲ್ಕತ್ತ: ತೃಣಮೂಲ ಕಾಂಗ್ರೆಸ್‌ನ ಬಹುತೇಕ ಶಾಸಕರು ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪರವಾಗಿದ್ದಾರೆ ಎಂದು ಟಿಎಂಸಿ ಹಿರಿಯ ನಾಯಕ ಸೋಭಾಂದೇಬ್ ಚಟ್ಟೋಪಾಧ್ಯಾಯ ಹೇಳಿದ್ದಾರೆ.

ಉಚ್ಚಾಟಿತ ಶಾಸಕಿ ರಿತಬ್ರತಾ ಬ್ಯಾನರ್ಜಿ ನೇತೃತ್ವದಲ್ಲಿ ಟಿಎಂಸಿಯ ಬಹುತೇಕ ಶಾಸಕರು ಪಕ್ಷಾಂತರ ಮಾಡಲಿದ್ದಾರೆ ಎನ್ನುವ ವಂದತಿಯ ನಡುವೆಯೇ ಸೋಭಾಂದೇಬ್, ಈ ಕುರಿತು ಮಾತನಾಡಿದ್ದಾರೆ.

ಪಶ್ಚಿಮ ಬಂಗಾಳದ ಆಡಳಿತ ಪಕ್ಷವಾದ ಬಿಜೆಪಿಯು ಪಕ್ಷಾಂತರ ಮಾಡಿಸುವ ಮೂಲಕ, ವಿರೋಧ ಪಕ್ಷವನ್ನು ಅಸ್ಥಿರಗೊಳಿಸುವ ಪ್ರಯತ್ನಗಳನ್ನು ಮಾಡುತ್ತಿದೆ. ಆದರೆ, ಟಿಎಂಸಿ ಒಗ್ಗಟ್ಟಿನಿಂದ ಅದು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.

ಇತ್ತೀಚೆಗೆ ಕೋಲ್ಕತ್ತದ ಹೋಟೆಲ್‌ವೊಂದರಲ್ಲಿ ಮತ್ತು ಶಾಸಕರ ಹಾಸ್ಟೆಲ್‌ನಲ್ಲಿ ಭಿನ್ನಮತೀಯ ಶಾಸಕರು ಸಭೆ ನಡೆಸಿದ್ದಾರೆ. 20 ರಿಂದ 50 ಶಾಸಕರು ಪಕ್ಷಾಂತರ ಮಾಡಲಿದ್ದಾರೆ ಎಂದು ವರದಿಯಾಗಿತ್ತು. ಇದು ಬಂಗಾಳದ ರಾಜಕೀಯ ವಲಯದಲ್ಲಿ ತಲ್ಲಣ ಉಂಟಾಗಲು ಕಾರಣವಾಗಿತ್ತು.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ 294 ಕ್ಷೇತ್ರಗಳಲ್ಲಿ 80 ಮಂದಿ ಟಿಎಂಸಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಅದರಲ್ಲಿ ಪಕ್ಷ ವಿರೋಧಿ ಚಟುವಟಿಕೆಯ ಹಿನ್ನಲೆಯಲ್ಲಿ ಇಬ್ಬರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Prajavani