Dailyhunt
ಟಿವಿಕೆಗೆ ಎಡಪಕ್ಷಗಳ ಬೆಂಬಲ: ಶೀಘ್ರದಲ್ಲೇ ಹಕ್ಕು ಮಂಡಿಸಲಿರುವ ವಿಜಯ್

ಟಿವಿಕೆಗೆ ಎಡಪಕ್ಷಗಳ ಬೆಂಬಲ: ಶೀಘ್ರದಲ್ಲೇ ಹಕ್ಕು ಮಂಡಿಸಲಿರುವ ವಿಜಯ್

ಚೆನ್ನೈ: ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ನೂತನ ಸರ್ಕಾರ ರಚಿಸಲು, ಎಡಪಕ್ಷಗಳು ಬೆಂಬಲ ನೀಡಿವೆ.

ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿವೆ. ಸಿಪಿಐ, ಸಿಪಿಐ(ಎಂ) ಮತ್ತು ವಿಸಿಕೆ ಪಕ್ಷಗಳು ಟಿವಿಕೆಗೆ ಬೆಂಬಲ ಸೂಚಿಸಿವ.ೆ

234 ಸದಸ್ಯ ಬಲದ ತಮಿಳುನಾಡಿನಲ್ಲಿ 108 ಸ್ಥಾನಗಳಲ್ಲಿ ಜಯ ಗಳಿಸಿದ್ದ ಟಿವಿಕೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಕಾಂಗ್ರೆಸ್‌ನ ಐವರು ಶಾಸಕರು ಈಗಾಗಲೇ ಬೆಂಬಲ ಘೋಷಿಸಿದ್ದಾರೆ.

ಸಿಪಿಐ, ಸಿಪಿಐ(ಎಂ) ಮತ್ತು ವಿಸಿಕೆ ತಲಾ ಎರಡು ಸ್ಥಾನಗಳನ್ನು ಹೊಂದಿದೆ. ಇದರೊಂದಗೆ ಸಂಖ್ಯಾಬಲವು 119ಕ್ಕೆ ಏರಿಕೆಯಾಗಲಿದೆ. ಬಹುಮತಕ್ಕೆ ಬೇಕಿರುವ ಮ್ಯಾಜಿಕ್ ಸಂಖ್ಯೆ 118 ಆಗಿದೆ.

ರಾಜ್ಯಪಾಲರನ್ನು ಭೇಟಿಯಾಗಲಿರುವ ವಿಜಯ್...

ಟಿವಿಕೆ ಪಕ್ಷವು ಬಹುಮತ ಗಳಿಸುವುದು ಖಚಿತವಾಗಿದೆ. ಟಿವಿಕೆ ಮುಖ್ಯಸ್ಥ ವಿಜಯ್ ಅವರು ಸಂಜೆ 4.30ಕ್ಕೆ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ ಎಂದು ಟಿವಿಕೆ ನಾಯಕ ಕಾಮರಾಜ್ ಪ್ರತಿಕ್ರಿಯಿಸಿದ್ದಾರೆ.

ಸಿಪಿಐ, ಸಿಪಿಐ(ಎಂ) ಮತ್ತು ವಿಸಿಕೆಗಳು ಸರ್ಕಾರ ರಚಿಸಲು ಮತ್ತು ವಿಜಯ್ ಅವರನ್ನು ತಮಿಳುನಾಡಿನ ಮುಖ್ಯಮಂತ್ರಿಯನ್ನಾಗಿ ಮಾಡಲು ಒಪ್ಪಿಕೊಂಡಿರುವುದು ನಿಜಕ್ಕೂ ಸಂತಸ ತಂದಿದೆ ಎಂದು ಕಾಮರಾಜ್ ತಿಳಿಸಿದ್ದಾರೆ.

ಈ ಪ್ರತಿಕ್ರಿಯೆ ಬರುತ್ತಿದ್ದಂತೆಯೇ ಪಕ್ಷದ ಕಚೇರಿಯ ಹೊರಗಡೆ ಟಿವಿಕೆ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Prajavani