Dailyhunt Logo
  • Light mode
    Follow system
    Dark mode
    • Play Story
    • App Story
ಟ್ರಂಪ್ ಪರವಾಗಿ ಪ್ರಧಾನಿ ಮೋದಿಗೆ ಶ್ವೇತಭವನಕ್ಕೆ ಆಹ್ವಾನ ನೀಡಿದ ರೂಬಿಯೋ

ಟ್ರಂಪ್ ಪರವಾಗಿ ಪ್ರಧಾನಿ ಮೋದಿಗೆ ಶ್ವೇತಭವನಕ್ಕೆ ಆಹ್ವಾನ ನೀಡಿದ ರೂಬಿಯೋ

ವದೆಹಲಿ: ಭವಿಷ್ಯದಲ್ಲಿ ಶ್ವೇತಭವನಕ್ಕೆ ಭೇಟಿ ನೀಡಿ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿದ್ದಾರೆ.

ಆಹ್ವಾನ ನೀಡಿದ್ದದರ ಬಗ್ಗೆ ಭಾರತದಲ್ಲಿರುವ ಅಮೆರಿಕ ರಾಯಭಾರಿ ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿದ್ದಾರೆ.

'ಮುಂದಿನ ದಿನಗಳಲ್ಲಿ ಶ್ವೇತಭವನಕ್ಕೆ ಭೇಟಿ ನೀಡಿ ಎಂದು ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರ ಪರವಾಗಿ ಮಾರ್ಕೊ ರೂಬಿಯೋ ಅವರು ಪ್ರಧಾನಿ ಮೋದಿ ಅವರಿಗೆ ಅಹ್ವಾನ ನೀಡಿದ್ದಾರೆ' ಎಂದು ಬರೆದುಕೊಂಡಿದ್ದಾರೆ.

ಭಾರತದೊಂದಿಗಿನ ಸಂಬಂಧ ಸುಧಾರಿಸುವ ಸಲುವಾಗಿ ಮಾರ್ಕೊ ರುಬಿಯೋ ಇದೇ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಂಡಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತುಕತೆ ನಡೆಸಿದ್ದಾರೆ.

ದೆಹಲಿಯಲ್ಲಿ ನಡೆಯಲಿರುವ ಕ್ವಾಡ್ ವಿದೇಶಾಂಗ ಸಚಿವರ ಸಭೆಯಲ್ಲಿಯೂ ರುಬಿಯೋ ಭಾಗಿಯಾಗಲಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Prajavani